Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಾರು ಅಪಘಾತ

---Advertisement---

ಚಿತ್ರದುರ್ಗ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಮರ್ಥ್ ಶಾಮನೂರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ ಹಿರಿಯೂರು ಬೈಪಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸಮಯಕ್ಕೆ ಸರಿಯಾಗಿ ಏರ್‌ಬ್ಯಾಗ್‌ಗಳು ತೆರೆದುಕೊಂಡ ಪರಿಣಾಮ ಭಾರಿ ಅನಾಹುತ ತಪ್ಪಿದೆ.ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು. ಸಮರ್ಥ್ ಶಾಮನೂರು ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಅವರನ್ನು ಬೇರೊಂದು ವಾಹನದಲ್ಲಿ ದಾವಣಗೆರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಹಿರಿಯೂರು ನಗರ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now