ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಆರ್.ಟಿ.ನಗರದ ನಿವಾಸದಲ್ಲಿ ಭೇಟಿ ಮಾಡಿದ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು 2021ನೇ ಸಾಲಿನ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಮುಖ್ಯಮಂತ್ರಿಗಳನ್ನು ಗೌರವಿಸಿದ ಸಚಿವರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸಚಿವರ ಆಹ್ವಾನವನ್ನು ಮುಖ್ಯಮಂತ್ರಿಗಳು ಸಂತೋಷದಿಂದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಕೂಡ ಸನ್ಮಾನಿಸಿ ಆಹ್ವಾನಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಹಿರಿಯ ಮುತ್ಸುದ್ಧಿ ಎಸ್.ಎಂ.ಕೃಷ್ಣ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಅಶೋಕ್ ಅವರನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.
ಕೋವಿಡ್ ನಿಯಮಗಳನ್ನು ಮೀರದಂತೆ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಅ. 7ರಂದು ಮೈಸೂರಿನಲ್ಲಿ ದಸರಾ ಉದ್ಘಾಟನೆ ಬಳಿಕ ಚಾಮರಾಜನಗರಕ್ಕೂ ಭೇಟಿ ನೀಡಲಿದ್ದಾರೆ ಎಂದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…