ಸುದ್ದಿಒನ್, ಚಿತ್ರದುರ್ಗ, ಮೇ. 10 : ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ನಿಧನಕ್ಕೆ ಕರ್ನಾಟಕ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ. ಅವರ ಗೌರವಾರ್ಥವಾಗಿ ಚಿತ್ರದುರ್ಗ ಜಿಲ್ಲೆಗೆ ಅನ್ವಯವಾಗುವಂತೆ ನಾಳೆ (ಮೇ.11 ಸೋಮವಾರ) ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ಸೇರಿದಂತೆ) ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ಜೊತೆಗೆ 3 ದಿನಗಳ ಕಾಲ ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







