ಚಿತ್ರದುರ್ಗ, ಮೇ 10: ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿವಂಗತ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದರೂ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳಿಗೆ ರಜೆ ಅನ್ವಯವಾಗಿದ್ದರೂ, ಸಾರ್ವಜನಿಕ ಪರೀಕ್ಷೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಪಿಯು ಉಪನಿರ್ದೇಶಕರು (PU DD) ತಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೀಡಾಗದೇ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಪರೀಕ್ಷೆಗಳು ಎಂದಿನಂತೆ ಸುಗಮವಾಗಿ ನಡೆಯಲಿವೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ವಿದ್ಯಾರ್ಥಿಗಳು ಸಂಚಾರ ಹಾಗೂ ಸಮಯದ ಬಗ್ಗೆ ಮುಂಚಿತವಾಗಿ ಗಮನಹರಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿದ್ದು, ನಾಳೆಯ ಪರೀಕ್ಷೆಯೂ ಪೂರ್ವನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಇಲಾಖೆ ಪುನರುಚ್ಚರಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








