ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜ.03: ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರುಗಳು ಇದೇ ಜನವರಿ 04 ರಂದು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗಾರಿ ಪರಿವೀಕ್ಷಣೆ ಮಾಡುವರು.
ಜ.04 ರಂದು ಬೆಳಿಗ್ಗೆ 10.30 ಕ್ಕೆ ಹಿರಿಯೂರು ತಾಲ್ಲೂಕು ವಿ.ವಿ.ಪುರ ಗ್ರಾಮದ ವಿ.ವಿ.ಸಾಗರ ಜಲಾಶಯ ಬಾಗಿನ ಅರ್ಪಣೆ, ಮಧ್ಯಾಹ್ನ 12 ರಿಂದ ಚಿಕ್ಕಸಿದ್ದವ್ವನಹಳ್ಳಿ ಕಾಲುವೆ ನಿರ್ಮಾಣ ಕಾಮಗಾರಿ, ಕುಂಚಿಗನಾಳ್ ಅಕ್ವಡೆಕ್ಟ್, ಸೇತುವೆ ನಿರ್ಮಾಣ ಕಾಮಗಾರಿ ಮತ್ತು ಗೋನೂರು ಸೇತುವೆ ನಿರ್ಮಾಣ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 2 ರಿಂದ ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್