Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗ ಜಿಲ್ಲೆಗೆ ಸಚಿವ ಯು.ಟಿ. ಖಾದರ್ ಭೇಟಿ: ಅಧಿಕಾರಿಗಳ ಸಭೆ, ಅಹವಾಲು ಸ್ವೀಕಾರ

---Advertisement---

 

ಚಿತ್ರದುರ್ಗ. ನ.05: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಇಲಾಖೆ ಸಚಿವ ಯು.ಟಿ.ಖಾದರ್ ಫರೀದ್ ಅವರು ಇದೇ ನವೆಂಬರ್ 06ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ನವೆಂಬರ್ 06ರಂದು ಬೆಳಿಗ್ಗೆ 5.30ಕ್ಕೆ ಬೆಂಗಳೂರಿನಿಂದ ಹೊರಟು 9ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಪಕ್ಷದ ಕಚೇರಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, 11.30ಕ್ಕೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗದಿಂದ ಹಿರಿಯೂರಿಗೆ ಪ್ರಯಾಣ ಬೆಳೆಸಿ, ಮಧ್ಯಾಹ್ನ 3ಕ್ಕೆ ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 4.30ಕ್ಕೆ ಹಿರಿಯೂರು ನಗರದ ಹುಳಿಯಾರು ರಸ್ತೆಯ ತಾಹ ಪ್ಯಾಲೇಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುವರು. ರಾತ್ರಿ 9ಕ್ಕೆ ಹಿರಿಯೂರು ನಗರದಿಂದ ಮಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ