ಸಚಿವ ಉಮೇಶ್ ಕತ್ತಿ ಇನ್ನಿಲ್ಲ

 

ಬೆಂಗಳೂರು : ಸಚಿವ ಉಮೇಶ್ ಕತ್ತಿ(61) ತೀವ್ರ ಹೃದಯಾಘಾತದಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ(MS Ramaiah Hospital)  ಕೊನೆಯುಸಿರೆಳೆದಿದ್ದಾರೆ.

ಡಾಲರ್ಸ್ ಕಾಲೋನಿಯ ಅವರ ನಿವಾಸದಲ್ಲಿ ರಾತ್ರಿ ಎದೆನೋವು ಕಾಣಿಸಿಕೊಂಡು ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದಿದ್ದಾರೆ.  ತಕ್ಷಣವೇ ಕುಟುಂಬಸ್ಥರು ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಸಚಿವ ಉಮೇಶ್ ಕತ್ತಿ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ  ತಡ ರಾತ್ರಿ ವಿಧಿವಶರಾಗಿದ್ದಾರೆ.

ಆಹಾರ ಮತ್ತು ಅರಣ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ತಂದೆಯವರು ಸಹಾ ಅಧಿವೇಶನ ನಡೆಯುತ್ತಿರುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇದೀಗ ಅವರ ಪುತ್ರ ಉಮೇಶ್ ಕತ್ತಿಯವರು ಕೂಡಾ ಹೃದಯಾಘಾತದಿಂದ ನಿಧನರಾಗಿರುವುದು ದುರಂತವೇ ಸರಿ.

ತಿಲಕವಾಡಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ

ಬೆಳಗ್ಗೆ 9 ಗಂಟೆಗೆ ವಿಶೇಷ ವಿಮಾನದಲ್ಲಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರುನಿಂದ ಬೆಳಗಾವಿಯ ಏರ್‌ಪೋರ್ಟ್‌ಗೆ ಸ್ಥಳಾಂತರಿಸಿ ತಿಲಕವಾಡಿಯ ಶಿವಬಸವನಗರದ ನಿವಾಸದಲ್ಲಿ ಅಂತಿಮ ದರ್ಶನ ನಡೆಯಲಿದೆ ಎಂದು ತಿಳಿದು ಬಂದಿದೆ.

ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಸಂತಾಪ

ಉಮೇಶ್‌ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ ಟ್ವೀಟ್‌ ಮಾಡಿ
ಸಂತಾಪ ಸೂಚಿಸಿದ್ದಾರೆ. ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago