Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಡಿಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಜಮೀರ್ ಅಹಮದ್‍ಖಾನ್

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 31 : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಬಾರೀ ಸದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಹುದ್ದೆಯ ಬದಲಾವಣೆಯ ಕುರಿತು ಬಾರೀ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ

ನಿಮ್ಮೆಲ್ಲರ ಆಶೀರ್ವಾದದಿಂದ ನಾನು ರಾಜ್ಯದ ಉಪ ಮುಖ್ಯಮಂತ್ರಿಯಾದರೆ ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇನೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್‍ಖಾನ್ ಅವರು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರಕ್ಕೆ ಆಗಮಿಸಿದ್ದ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತ ನಾನು ಮಂತ್ರಿಯಾಗಿದ್ದೇನೆಂದರೆ ಅದಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕಾರಣ. ರಾಜ್ಯದಲ್ಲಿ ನನಗೆ ಉಪ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೆ ದಲಿತರು, ಶೋಷಿತರು, ಅಲ್ಪಸಂಖ್ಯಾತರು, ದಮನಿತರ ಪರವಾಗಿ ಕೆಲಸ ಮಾಡುತ್ತೇನೆ. ಸಂವಿಧಾನದ ಆಶಯದಂತೆ ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕೆಂಬುದು ನನ್ನ ಬಯಕೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಎಂ.ಎಸ್.) ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ ಸಚಿವ ಬಿ.ಝಡ್. ಜಮೀರ್ ಅಹಮದ್‍ಖಾನ್‍ರವರು ಸರ್ವಧರ್ಮದ ನಾಯಕ. ಬಡವರು, ದಲಿತರು, ಶೋಷಿತರು, ಧ್ವನಿಯಿಲ್ಲದವರ ಬಗ್ಗೆ ಅಪಾರ ಕಾಳಜಿಯಿಟ್ಟುಕೊಂಡಿದ್ದಾರೆ. 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆಯೆಂದರೆ ಅದಕ್ಕೆ ಮುಸ್ಲಿಂರು, ದಲಿತರು ಕಾರಣ ಎನ್ನುವುದನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರೆಯಬಾರದು. ನಿಜವಾಗಿಯೂ ಕಾಂಗ್ರೆಸ್ ನಾಯಕರುಗಳಿಗೆ ಬದ್ದತೆ, ಮುಸ್ಲಿಂರ ಬಗ್ಗೆ ಗೌರವವಿದ್ದರೆ ಸಚಿವ ಜಮೀರ್ ಅಹಮದ್‍ಖಾನ್‍ರವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ಬಸವಕಲ್ಯಾಣದಿಂದ ಬೆಂಗಳೂರುವರೆಗೆ ದಲಿತರು ಪಾದಯಾತ್ರೆ ಕೈಗೊಳ್ಳಬೇಕಾಗುತ್ತದೆಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಮುಸ್ಲಿಂರು, ದಲಿತರ ಮತಗಳನ್ನು ಪಡೆದು ಅಧಿಕಾರ ಅನುಭವಿಸಿಕೊಂಡು ಬರುತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರ ನೀಡುವಲ್ಲಿ ಏಕೆ ಈ ಎರಡು ಜಾತಿಯವರನ್ನು ನಿರ್ಲಕ್ಷಿಸುತ್ತಿದೆಯೆಂದು ಪ್ರಶ್ನಿಸಿದ ಬಾಳೆಕಾಯಿ ಶ್ರೀನಿವಾಸ್ ಅಂಬೇಡ್ಕರ್‍ರವರ ಆಶಯದಂತೆ ಬಿ.ಝಡ್. ಜಮೀರ್ ಅಹಮದ್‍ಖಾನ್ ರಾಜ್ಯದ
ಉಪ ಮುಖ್ಯಮಂತ್ರಿಯಾಗಬೇಕೆಂದು ನಮ್ಮ ಆಸೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ವಕ್ಫ್‍ಬೋರ್ಡ್ ಮಾಜಿ ಚೇರ್ಮನ್ ಎಂ.ಸಿ.ಒ.ಬಾಬು, ವಕ್ಫ್ ಮಂಡಳಿ ರಾಜ್ಯ ಸಮಿತಿ ಸದಸ್ಯ ಕೆ.ಅನ್ವರ್‍ಪಾಷ ಸೇರಿದಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಹಲಿಂಗಪ್ಪ ಕುಂಚಿಗನಹಾಳ್, ಕೆ.ರಾಜಣ್ಣ, ಕಣುಮೇಶ್ ಜಾಲಿಕಟ್ಟೆ, ವೆಂಕಟೇಶ್ ಕವಾಡಿಗರಹಟ್ಟಿ ಹಾಗೂ ಅನೇಕ ದಲಿತ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಚಳ್ಳಕೆರೆ ಗೇಟ್‍ನಿಂದ ತೆರೆದ ವಾಹನದಲ್ಲಿ ಸಚಿವ ಬಿ.ಝಡ್. ಜಮೀರ್ ಅಹಮದ್‍ಖಾನ್‍ರನ್ನು ಮರೆವಣಿಗೆ ಮೂಲಕ ಕರೆತರಲಾಯಿತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now