Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಜಮೀರ್ ಅಹಮದ್‍ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ : ಚಿತ್ರದುರ್ಗದಲ್ಲಿ ಜೆಡಿಎಸ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 30 : ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಜಾತ್ಯಾತೀತ ಜನತಾದಳದಿಂದ ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ವಸತಿ ಸಚಿವ ಜಮೀರ್ ಅಹಮದ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಜೆಡಿಎಸ್.ಜಿಲ್ಲಾಧ್ಯಕ್ಷ ಎಂ.ಜಯಣ್ಣ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ವಸತಿ ಸಚಿವ ಜಮೀರ್ ಅಹಮದ್ ಮನೆಗಳನ್ನು ನೀಡಲು ಬಡವರಿಂದ ಲಂಚ ಪಡೆದಿದ್ದಾರೆಂದು ಅವರ ಪಕ್ಷದ ಶಾಸಕರುಗಳೆ ಆದ ಪಾಟೀಲ್, ರಾಜು ಕಾಗೆ ಆಪಾದಿಸುತ್ತಿದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡಿ ರಾಜ್ಯದ ಜನತೆಯನ್ನು ಮರಳು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅಭಿವೃದ್ದಿ ಕುಂಠಿತಗೊಂಡಿದೆ. ಕೂಡಲೆ ಸಚಿವ ಜಮೀರ್ ಅಹಮದ್‍ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುವುದು ಬೇಡ ಎಂದು ಆಗ್ರಹಿಸಿದರು.

 

ಜೆಡಿಎಸ್. ಮಾಜಿ ಅಧ್ಯಕ್ಷ ಡಿ.ಯಶೋಧರ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯನ್ನು ಉಚಿತ ಭಾಗ್ಯಗಳ ಭ್ರಮೆಯಲ್ಲಿ ತೇಲಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮದ ಹಣವನ್ನು ಲೂಟಿ ಹೊಡೆಯಲಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯಿಲ್ಲ. ಕೂಡಲೆ ರಾಜಿನಾಮೆ ನೀಡುವುದರ ಜೊತೆಗೆ ವಸತಿ ಜಮೀರ್ ಅಹಮದ್‍ರವನ್ನು ಸಚಿವ ಸ್ಥಾನದಿಂದ ಉಚ್ಚಾಟಿಸಬೇಕು. ಕಾಂಗ್ರೆಸ್‍ನಲ್ಲಿ ಗುಂಪುಗಾರಿಕೆ ಶುರವಾಗಿದೆ ಎಂದರು.
ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರ ಸಿಲುಕಿಕೊಂಡಿದೆ. ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಠಾಚಾರವಾಗಿರುವುದನ್ನು ಸಂಪೂರ್ಣ ತನಿಖೆಗೊಳಪಡಿಸಬೇಕು. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ರವೀಂದ್ರಪ್ಪ ಮಾತನಾಡಿ ರಾಜ್ಯದ ಜನ ಯಾರು ಉಚಿತ ಭಾಗ್ಯಗಳನ್ನು ಕೇಳಿಲ್ಲ. ಸಿದ್ದರಾಮಯ್ಯ ಪಂಚ ಗ್ಯಾರೆಂಟಿಗಳನ್ನು ಘೋಷಿಸಿ ಜನತೆಯನ್ನು ಸೋಮಾರಿಗಳನ್ನಾಗಿ ಮಾಡಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್‍ರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

 

ಜೆಡಿಎಸ್.ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಿ.ಟಿ.ತಿಪ್ಪೇಸ್ವಾಮಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಹನುಮಂತರಾಯಪ್ಪ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಪರಮೇಶ್ವರಪ್ಪ, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಗಣೇಶ್‍ಮೂರ್ತಿ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ವೀರಭದ್ರಣ್ಣ, ಶಿವಶಂಕರ್, ನಗರಸಭೆ ಸದಸ್ಯರುಗಳಾದ ಸೈಯದ್ ನಸ್ರುಲ್ಲಾ, ದೀಪಕ್, ಮಾಜಿ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಜೆಡಿಎಸ್.ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment