ಬೆಂಗಳೂರು: ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ದಿವ್ಯಾ ಹಾಗರಗಿ ಇಷ್ಟು ದಿನ ತಲೆ ಮರೆಸಿಕೊಂಡು ಓಡಾಡುತ್ತಿದ್ದಳು. ಆಕೆಯನ್ನು ನಿನ್ನೆ ಅರೆಸ್ಟ್ ಮಾಡಲಾಗಿದೆ. ಬಳಿಕ ಈ ಸಂಬಂಧ ಸುದ್ದಿಗೋಷ್ಟಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮರು ಪರೀಕ್ಷೆ ಮಾಡುವ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, 1
ಗೃಹ ಸಚಿವ @JnanendraAraga 545 PSI ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದಿದ್ದರು.
ಈಗ ಸರ್ಕಾರ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಪಡಿಸಿ ಮರು ಪರೀಕ್ಷೆಗೆ ಮುಂದಾಗಿದೆ. ಸರ್ಕಾರ ಮರು ಪರೀಕ್ಷೆಗೆ ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲರ್ ತಂತ್ರವಷ್ಟೆ. ಆದರೆ ಗೃಹ ಸಚಿವರ ಪಾತ್ರವಿಲ್ಲದೆ #PSISCAM ನಡೆಯಲು ಸಾಧ್ಯವೇ?.
PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ನೇರ ಪಾತ್ರವಿದೆ.
ಪ್ರಕರಣದ ಕಿಂಗ್‌ಪಿನ್ ಬಂಧಿತೆ ದಿವ್ಯಾ ಹಾಗರಗಿ ಮನೆಗೆ ಜ್ಞಾನೇಂದ್ರರವರು ಡೀಲಿಂಗ್ ಮಾಡಲು ಹೋಗಿದ್ದು ಸತ್ಯವಲ್ಲವೆ?
ಪ್ರಕರಣದ ಬಗ್ಗೆ ಮಾಹಿತಿ ಕೊಡುವವರಿಗೆ ನೋಟಿಸ್ ಕೊಡುವ CID ಜ್ಞಾನೇಂದ್ರರ ವಿಚಾರಣೆಯನ್ನು ಇನ್ನೂ ಯಾಕೆ ನಡೆಸಿಲ್ಲ? CID ಯಾರನ್ನು ರಕ್ಷಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.