ಚಿತ್ರದುರ್ಗ,(ಫೆಬ್ರವರಿ.25) : ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಫೆಬ್ರವರಿ 26ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಫೆ.26ರಂದು ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗ ಪ್ರವಾಸಿ ಮಂದಿರಕ್ಕೆ ಆಗಮಿಸಿ, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ನಂತರ ಮಧ್ಯಾಹ್ನ 1.30ಕ್ಕೆ ಹಿರೇಕೆರೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಮಾರ್ಚ್ 1ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಮಾರ್ಚ್ 1ರಂದು ಸಂಜೆ 7ಕ್ಕೆ ಹೊಸದುರ್ಗ ತಾಲ್ಲೂಕಿನ ಹಾಲುರಾಮೇಶ್ವರ ಉತ್ಸವ-2022ರ ಕಾರ್ಯಕ್ರಮದಲ್ಲಿ ಹೊಸದುರ್ಗ ಶಾಸಕ ಡಿ.ಗೂಳಿಹಟ್ಟಿ ಡಿ.ಶೇಖರ್ ಅವರೊಂದಿಗೆ ಭಾಗವಹಿಸುವರು. ನಂತರ ರಾತ್ರಿ 7.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

