Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಅಷ್ಟು ಬರಗೆಟ್ಟಿಲ್ಲ : ರಮ್ಯಾ ವಿಚಾರವಾಗಿ ಆರ್ ಅಶೋಕ್ ಕಿಡಿ

---Advertisement---

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಸದ್ಯ ಕಾಂಗ್ರೆಸ್ ಪಕ್ಷದಲ್ಲೂ ಆಗಾಗ ಗುರುತಿಸಿಕೊಳ್ಳುತ್ತಾರೆ. ಆದರೆ ಸದ್ಯಕ್ಕೆ ರಾಜಕೀಯಕ್ಕಿಂತ ಹೆಚ್ಚಾಗಿ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ರಮ್ಯಾ ಅವರಿಗೆ ಬಿಜೆಪಿ ಆಫರ್ ಮಾಡಿದೆ ಎನ್ನಲಾಗುತ್ತಿದೆ. ಖಾಸಗಿ ಚಾನೆಲ್ ಒಂದರಲ್ಲಿ ಸ್ವತಃ ರಮ್ಯಾ ಅವರೇ ಬಿಜೆಪಿ ಆಫರ್ ಬಗ್ಗೆ ಮಾತನಾಡಿದ್ದರು.

ಈ ಸಂಬಂಧ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ನ ಮಾಜಿ ಸಂಸದೆ ರಮ್ಯಾ ಅವರನ್ನು ಬಿಜೆಪಿ ಪಕ್ಷಕ್ಕೆ ಕರೆದಿಲ್ಲ. ಬಿಜೆಪಿ ಪಕ್ಷ ರಮ್ಯಾಗೆ ಸೀಟು ಕೊಡುವಷ್ಟು ಬರಗೆಟ್ಟು ಹೋಗಿಲ್ಲ. ರಮ್ಯಾ ಅವರನ್ನು ನಮ್ಮ ಪಕ್ಷಕ್ಕೆ ಕರೆದಿಲ್ಲ ಎಂದಿದ್ದಾರೆ.

ಇನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇನೆ ಸೀಟು ಕೊಟ್ಟಿಲ್ಲ. ಇನ್ನು ರಮ್ಯಾ ಅವರಿಗೆ ಸೀಟು ಕೊಡುತ್ತೇವಾ ಎಂದು ಪ್ರಶ್ನಿಸಿದ್ದಾರೆ. ಅದೆಲ್ಲಾ ಸುಳ್ಳು. ರಮ್ಯಾ ಅವರಿಗೆ ಬಿಜೆಪಿ ಆಹ್ವಾನ ನೀಡಿಲ್ಲ. ರಮ್ಯಾ ಅವರು ಮೂಲ ಕಾಂಗ್ರೆಸ್ಸಿಗರು. ಕಾಂಗ್ರೆಸ್ ನಲ್ಲಿ ಮಾಧ್ಯಮಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈಗ ವಿಧಾನಸಭಾ ಚುನಾವಣೆ ಇದೆ. ಹೀಗಾಗಿ‌ಪ್ರಚಾರಕ್ಕಾಗಿ ಹೀಗೆಲ್ಲಾ ಮಾತನಾಡುತ್ತಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...