ಬೆಂಗಳೂರು : ಬಹಳ ಸಂಚಲನ ಮೂಡಿಸಿದ್ದ ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಕೇಸಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನ ಇಟ್ಟಿದೆ. ಈ ಕೇಸನ್ನು ಕಡೆಗೂ ಎಸ್ಐಟಿಗೆ ವಹಿಸಿದೆ. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ನಾಪತ್ತೆ ಕೇಸಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಮೊಹಂತಿ ನೇತೃತ್ವದ ಎಸ್ಐಟಿ ತಂಡವನ್ನು ರಚನೆ ಮಾಡಿದೆ.
ಈ ಎಸ್ಐಟಿ ತಂಡದಲ್ಲಿ ಸದಸ್ಯರಾಗಿ ಅನುಚೇತ್, ಸೌಮ್ಯ ಲತಾ, ಜಿತೇಂದ್ರ ಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅತ್ಯಾ*ಚಾರ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರವಣ ಮೋಹಂತಿ ಎಸ್ಐಟಿಗೆ ಮುಖ್ಯಸ್ಥರಾಗಿರುತ್ತಾರೆ. ಇನ್ನು ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ್ ಎಸ್ಐಟಿ ತಂಡದ ಸದಸ್ಯರಾಗಿರುತ್ತಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಂಬಂಧ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಕೊಲೆ ಮಾಡಿ, ಹೂತು ಹಾಕಿರುವ ವ್ಯಕ್ತಿಯೇ ಆ ಬಗ್ಗೆ ಸತ್ಯ ಒಪ್ಪಿಕೊಳ್ಳಲು ಬಂದಿದ್ದಾನೆ. ಹೀಗಿರುವಾಗ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದು ಮನವಿ ಮಾಡಲಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹೊಸದೊಂದು ನಿರ್ಧಾರವನ್ನ ಕೈಗೊಂಡಿದ್ದಾರೆ. ಎಸ್ಐಟಿ ತನಿಖೆಗೆ ಒಪ್ಪಿಸಿದ್ದಾರೆ. ಇನ್ಮುಂದೆ ತನಿಖೆಯೂ ನಡೆಯಲಿದೆ.
