in

ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೊನಾ : ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ..!

suddione whatsapp group join

ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ನಿನ್ನೆ ಒಂದೆ ದಿನ 28,723 ಕೇಸ್ ಗಳು ರಾಜ್ಯದಲ್ಲಿ ಪತ್ತೆಯಾಗಿತ್ತು. ರಾಜಕಾರಣಿಗಳು ಕೂಡ ಒಬ್ಬೊಬ್ಬರೇ ಸೋಂಕಿಗೆ ಗುರಿಯಾಗುತ್ತಿದ್ದಾರೆ. ಇದೀಗ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಎಂಬ ಮಾಹಿತಿ ಲಭ್ಯವಾಗುತ್ತಿದೆ.

ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಬೆಂಗಳೂರಿನ ನೊವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಶಾಸಕಿ ಅನಿತಾ ಕುಮಾರಸ್ವಾಮಿ ಕಳೆದ ಎರಡು ದಿನದ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬೆಂಗಳೂರಿಗೆ ವಾಪಾಸ್ಸಾಗಿದ್ದರು. ಬಳಿಕ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ಕಂಡು ಬಂದಿದೆ. ಸದ್ಯ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಇತಿಹಾಸದಲ್ಲಿಯೇ ಮೊದಲು : ಮಂಡ್ಯದ ಶ್ರೀರಂಗನ ದೇವಾಸ್ಥಾನದಲ್ಲಿ ದೀಪೋತ್ಸವ ರದ್ದು..!

10 ಸಾವಿರ ವೈದ್ಯ ವಿದ್ಯಾರ್ಥಿಗಳ ನಿಯೋಜನೆ : ಸಚಿವ ಸುಧಾಕರ್