ಹಾಸನ: ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿ, ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಅವರ ಕೊಬ್ಬರಿ ತುಂಬಿದ್ದ ಮನೆ ಬೆಂಕಿಗಾಹುತಿಯಾಗಿದೆ. ಇದರ ಪರಿಣಾಮ ಮನೆಯಲ್ಲಿಯೇ ಇದ್ದ ಕಾರು ಸೇರಿದಂತೆ ಲಕ್ಷಾಂತರ ರೂಪಾಯಿ ವಸ್ತುಗಳು ಕೂಡ ಬೆಂಕಿಗಾಹುತಿಯಾಗಿದೆ.
ಚನ್ನರಾಯಪಟ್ಟಣದ ಚೋಳೆನಹಳ್ಳಿಯಲ್ಲಿ ಶಾಸಕ ಬಾಲಕೃಷ್ಣ ಅವರ ವಾಸದ ನಿವಾಸವಿದೆ. ಅದರ ಕೂಗಳತೆ ದೂರದಲ್ಲಿಯೇ ಕೊಬ್ಬರಿ ತುಂಬಿದ ಮನೆ ಇದೆ. ಆದರೆ ಆಕಸ್ಮಿಕವಾಗಿ ಬೆಳಗಿನ ಜಾವ ತಗುಲಿದ ಬೆಂಕಿಗೆ ಇಡೀ ಮನೆ ಸುಟ್ಟು ಭಸ್ಮವಾಗಿದೆ. ನೋಡ ನೋಡುತ್ತಿದ್ದಂತೆಯೇ ದಟ್ಟ ಹೊಗೆ ಆಕ್ರಮಿಸಿಕೊಂಡಿದೆ.
ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಹೊಗೆ ಅಲ್ಲಿನ ಪ್ರದೇಶವನ್ನೆಲ್ಲ ತುಂಬಿಕೊಂಡಿದೆ. ಸ್ಥಳೀಯರು ಸಹ ಅಗ್ನಿಶಾಮಕ ಸಿಬ್ಬಂದಿ ಜೊತೆಗೆ ಸೇರಿ ಬೆಂಕಿ ನಂದಿಸುವ ಕೆಲಸಕ್ಕೆ ಸಹಾಯ ಮಾಡಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…