Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್,                         ಮೊ : 87220 22817

ಚಿತ್ರದುರ್ಗ, (ಸೆ.06) : ಭಾರತೀಯ ಜನತಾ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಮಾತಿನಂತೆ ಇಂದು ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ನಗರದ ತರಾಸು ರಂಗಮಂದಿರಲ್ಲಿ ಇಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ  ಆಯೋಜಿಸಿದ್ದ ಕೊಳಚೆ ಪ್ರದೇಶದ ಫಲಾನಿಭವಿಗಳಿಗೆ ಹಕ್ಕುಪತ್ರ ವಿತರಣೆ, ನಗರಸಭೆಯ ಆಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ಸಾಲಮನ್ನಾ ಪತ್ರ ವಿತರಣೆ ಹಾಗೂ ಡಾ:ಬಿ.ಆರ್ ಅಂಬೇಡ್ಕರ್, ವಸತಿ ಯೋಜನೆಯಡಿ ಫಲಾನಿಭವಿಗಳಿಗೆ ಕಾರ್ಯಾದೇಶ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆ ಪೂರ್ವದಲ್ಲಿ ಬಿಜೆಪಿ ನೀಡಿದ ಮಾತಿನಂತೆ ನಡೆದುಕೊಳ್ಳುತ್ತಿದೆ. ಅದರಂತೆ ಹಕ್ಕುಪತ್ರ ನೀಡುವುದರ ಜೊತೆಗೆ 1800 ಮನೆಗಳಿಗೆ ಸಾಲ ಮನ್ನಾ ಮಾಡಿ ಹಕ್ಕುಪತ್ರವನ್ನು ನೀಡಿದೆ. ಕೊಳಚೆ ನಿರ್ಮೂಲನ ಮಂಡಳಿಯಿಂದ ನಗರದಲ್ಲಿ  ಗುಡಿಸಲುಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿರುವ 9000 ಮನೆಗಳನ್ನು ಸರ್ವೆ ಮಾಡಲಾಗಿದ್ದು, ಇಂದು ಬುದ್ದ ನಗರಕ್ಕೆ ಮಾತ್ರ ಸಾಂಕೇತಿಕವಾಗಿ ನೀಡಲಾಗುತ್ತಿದ್ದು, ಹಂತ ಹಂತವಾಗಿ ಎಲ್ಲಾರಿಗೂ ಹಕ್ಕುಪತ್ರ ನೀಡಲಾಗುವುದು ಎಂದು ಹೇಳಿದರು.

ಬಡವರಿಗೆ ಸೂರು ಕಟ್ಟಿಕೊಡಲು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಶ್ರಮಿಸುತ್ತಿದ್ದಾರೆ. ಯಾವುದೇ ಅಮೀಷಗಳಿಗೆ ಒಳಗಾಗದೆ ಸರ್ಕಾರ ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ಹಕ್ಕುಪತ್ರ ನೀಡುತ್ತಿದೆ. ಅಲ್ಲದೆ ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರವೇ 6 ಲಕ್ಷ ರೂ.ಗಳ ಅನುದಾನವನ್ನು ನೀಡುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ನಗರ ಪ್ರದೇಶಗಲ್ಲಿ ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಬಹಳ ಕಷ್ಟದ ಕೆಲಸವಾಗಿದೆ. ಕಾರಣ ಮನೆಗಳನ್ನು ಹೊಂದಿರುವವರು ಕೂಡ ಮನೆ ಬೇಕು ಎಂದು ಅರ್ಜಿ ಹಾಕಿ, ಸರ್ಕಾರಕ್ಕೆ ಡಿಡಿ ಹಣ ಕಟ್ಟಿದ್ದಾರೆ. ಇದರಿಂದ ಸ್ವಲ್ಪ ವಿಳಂಬ ಆಗುತ್ತಿದ್ದು, ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ತಾರತಮ್ಯ ಮಾಡದೆ ಸರ್ಕಾರದ ಮಾನದಂಡದ ಪ್ರಕಾರ ಮನೆಗಳನ್ನು ನೀಡಲಾಗುವುದು ಎಂದರು.

ಮೆಗಳಹಳ್ಳಿ ಗ್ರಾಮದ ಹತ್ತಿರ ಕೆಳ ಹಾಗೂ ಮಹಡಿ ಮನೆ ಸೇರಿದ 1001 ಮನೆಗಳನ್ನು ಕಟ್ಟಲಾಗುವುದು ಅದಕ್ಕೆ ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ವೆಂಕಟೇಶ್, ಶ್ರೀನಿವಾಸ್ ಪೌರಾಯುಕ್ತ ಸತೀಶ್ ಸೇರಿದಂತೆ ಇತರರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!