ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಒಂಭತ್ತು ತಿಂಗಳು ಬಾಕಿ ಇರುವಾಗಲೇ ಎಲ್ಲಾ ಪಕ್ಷಗಳು ಚುನಾವಣಾ ಕಸರತ್ತು ನಡೆಸುತ್ತಿವೆ. ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಖುರ್ಚಿಗಾಗಿಯೇ ಸ್ಪರ್ಧೆ ಇದೆ. ಈ ಮಧ್ಯೆ ಶಾಸಕ ಜಮೀರ್ ಅಹ್ಮದ್ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ ಹೊರಹಾಕಿದ್ದಾರೆ.
ಇಂದು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಿದ್ದು, ಈ ಸಂಬಂಧ ಬೆಂಗಳೂರಲ್ಲೂ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ನಾತನಾಡಿದ ಶಾಸಕ ಜಮೀರ್, ಒಂದೇ ಸಮಾಜದಿಂದ ಯಾರು ಮುಖ್ಯಮಂತ್ತಿಯಾಗಲೂ ಸಾಧ್ಯವಿಲ್ಲ. ಎಲ್ಲಾ ಸಮಾಜದವರು ಕೂಡ ಬೆಂಬಲ ನೀಡಬೇಕು. ಎಲ್ಲರಿಗೂ ಆಸೆ ಇರುತ್ತೆ. ಆಸೆ ಇರುವುದು ತಪ್ಪಲ್ಲ. ನನಗೂ ಮುಖ್ಯಮಂತ್ರಿ ಆಗುಬೇಕೆಂಬ ಆಸೆ ಇದೆ. ನಮ್ಮ ಸಮಾಜಕ್ಕಾಗಿ ನಾನು ಮುಖ್ಯಮಂತ್ರಿಯಾಗಬೇಕು ಎಂದಿದ್ದಾರೆ.
ಇದೇ ವೇಳೆ ಸಿದ್ದರಾಮೋತ್ಸವದ ಬಗ್ಗೆ ಮಾತನಾಡಿದ್ದು, ಸಿದ್ದರಾಮೋತ್ಸವದ ಅವರು ಮಾಡ್ತಿಲ್ಲ. ನಾವೆಲ್ಲಾ ಸೇರಿ ಅಭಿಮಾನಿಗಳು ಸೇರಿ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ರಾಜಕೀಯಕ್ಕೆ ಬಂದು 40 ವರ್ಷ ಆಗಿದೆ. ಇದೇ ಕಾರಣಕ್ಕೆ ಸಿದ್ದರಾಮೋತ್ಸವ ಮಾಡಲಾಗುತ್ತಿದೆ. ಇದುವರೆಗೂ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಇದೇ ಕಾರಣಕ್ಕೆ ಅವರ ಅಭಿಮಾನಿಗಳಿಗಾಗಿ 75ನೇ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ ಎಂದಿದ್ದಾರೆ.