Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭೇಟಿ :  ಕುಟುಂಬಸ್ಥರಿಗೆ ವೈಯಕ್ತಿವಾಗಿ ಆರ್ಥಿಕ ನೆರವು

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 29 : ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಸ್ಥರನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಭೇಟಿ ಮಾಡಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ, ಸರ್ಕಾರದಿಂದ ಮನೆಗಳನ್ನು ಮಂಜೂರು ಮಾಡಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಮಳೆ ಹಾನಿಯಿಂದಾಗಿ ಮನೆಯನ್ನು ಕಳೆದುಕೊಂಡಂತಹ ತಿಮ್ಮಯ್ಯ, ತಿಮ್ಮಕ್ಕ ಎಂಬುವರ ಮನೆಯು ಕುಸಿದಿದ್ದು ಅದೃಷ್ಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಮನೆಯನ್ನ ಕಳೆದುಕೊಂಡು ಕಂಗಲಾಗಿದ್ದ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ದಾವಿಸಿ ಆರ್ಥಿಕ ಸಹಾಯ ಮಾಡಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೋಸ್ಕರ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿ ಮಾಡಿ ಅನುದಾನಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುವೆ, ಈಗಾಗಲೇ ಶಾಸಕರ ಅನುದಾನದ ಅಡಿಯಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ, ಚೆಕ್ ಡ್ಯಾಂಗಳು, ಅಂಗನವಾಡಿ ಕೇಂದ್ರಗಳು ಇತರೆ ಅಭಿವೃದ್ಧಿ ಕಾರ್ಯಗಳ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ, ಮುಂದಿನ ದಿನಗಳಲ್ಲಿ ಉಳಿದಂತಹ ಕ್ಷೇತ್ರಗಳ ಹಳ್ಳಿಗಳಲ್ಲಿಯೂ ಸಹ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಗ್ರಾಮದಲ್ಲಿ ಸಿಸಿ ರಸ್ತೆಗಳು ಬಾಕ್ಸ್ ಚರಂಡಿ ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಶಾಸಕರು ಗ್ರಾಮಕ್ಕೆ ಸಿಸಿ ರಸ್ತೆ ಹಾಗೂ ಬಾಕ್ಸ್ ಚರಂಡಿಗಳನ್ನ ನಿರ್ಮಾಣ ಮಾಡಿಕೊಡುವುದಕ್ಕೆ ಅತಿ ಶೀಘ್ರದಲ್ಲೇ ಭೂಮಿ ಪೂಜೆಯನ್ನು ಮಾಡಲಾಗುವುದು ಎಂದು ಗ್ರಾಮಸ್ಥರಿಗೆ ಸ್ಥಳದಲ್ಲೇ ಭರವಸೆ ನೀಡಿದರು.
ಗ್ರಾಮದಲ್ಲಿರುವಂತಹ ಈಶ್ವರ ದೇವಾಲಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ 5 ಲಕ್ಷ ಹಣವನ್ನು ಸ್ಥಳದಲ್ಲೇ ದೇವಾಲಯದ ಕಮಿಟಿಯವರಿಗೆ ಚೆಕ್ ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಗ್ಯಾರಟಿ ಸಮಿತಿ ಅಧ್ಯಕ್ಷರಾದ ಶಿವಣ್ಣ, ಓಬಣ್ಣನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಓಬಳೇಶ್, ಚಿತ್ರದುರ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್,ಗ್ರಾಮಸ್ಥರಾದ ವೆಂಕಟೇಶ್, ಹನುಮಂತಪ್ಪ, ತಿಮ್ಮಯ್ಯ, ರುದ್ರಪ್ಪ, ಚಂದ್ರಪ್ಪ, ರಮೇಶ್, ಈಶ್ವರ್, ಜಯಣ್ಣ, ಹನುಮಂತಪ್ಪ, ತಿಮ್ಮಪ್ಪ ನಾಗರಾಜ್, ಮಂಜುನಾಥ್ ಹಾಗೂ ಇತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment