ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂನ್. 24 : ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಇಸ್ರೇಲ್‍ನಲ್ಲಿ ಸಿಲುಕಿಕೊಂಡಿದ್ದ ಚಿತ್ರದುರ್ಗದ ವಿದ್ಯಾರ್ಥಿಯನ್ನು ಶಾಸಕರ ನೆರವಿನಿಂದ ಸುರಕ್ಷಿತವಾಗಿ ಕರೆತರಲಾಗಿದೆ.
ಈ ವಿಚಾರವನ್ನ ಜಬಿಉಲ್ಲಾ ಸಂಬಂಧಿಕರು ಶಾಸಕರ ಗಮನಕ್ಕೆ ತಂದಿದ್ದು ಶಾಸಕರು ದೆಹಲಿಯಲ್ಲಿ ಇರುವಂತಹ ಸಂಬಂಧ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಯುವಕನನ್ನ ರಕ್ಷಣೆ ಮಾಡಿಸಿದ್ದಾರೆ. ಯುದ್ಧದ ನಡುವೆ ಸಿಕ್ಕಿಕೊಂಡ ಜಬಿಉಲ್ಲಾ ಎಂ.ಎ ಅವರಿಗೆ ಚಿತ್ರದುರ್ಗದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಫೋನ್ ಮೂಲಕ ಸಂಪರ್ಕಿಸಿ ಯೋಗ ಕ್ಷೇಮವನ್ನು ವಿಚಾರಿಸಿ ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆಸಿ, ಬೆಂಗಳೂರು ಮೂಲಕ ತನ್ನ ತಾಯ್ನಾಡು ಚಿತ್ರದುರ್ಗ ಜಿಲ್ಲೆಗೆ ಯುವಕನನ್ನ ಕರೆ ತಂದಿದ್ದಾರೆ.
ಚಿತ್ರದುರ್ಗ ಜಿಲ್ಲೆ ವ್ಯಕ್ತಿ ಜಬಿಉಲ್ಲಾ ಎಂ.ಎ ಅವರು ಇಸ್ರೇಲ್ ನಲ್ಲಿ ಎಂಎಸ್ಸಿ ( ಪರಿಸರ ಸೂಕ್ಷ್ಮ ಜೀವವಿಜ್ಞಾನ) ವಿದ್ಯಾಭ್ಯಾಸಕ್ಕೆ ತೆರಳಿದ್ದರು, ಈ ನಡುವೆ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಭಾರತೀಯ ಪ್ರಜೆಗಳನ್ನು ಭಾರತ ಸರ್ಕಾರ ರಕ್ಷಣೆ ಮಾಡಿ ದೆಹಲಿಗೆ ಕರೆತರಲಾಗಿತ್ತು, ಇದರಲ್ಲಿ ನನ್ನನು ಕೂಡ ದೆಹಲಿಯ ಕರ್ನಾಟಕ ಭವನದಲ್ಲಿ ಇರಿಸಲಾಗಿತ್ತು, ದೆಹಲಿಯಿಂದ ಬೆಂಗಳೂರಿಗೆ ಬರುವುದಕ್ಕೆ ಹಣ ನನ್ನ ಬಳಿ ಇರಲಿಲ್ಲ, ನನ್ನ ಅದೃಷ್ಟಕ್ಕೆ ಶಾಸಕರ ನನಗೆ ಕಾಲ್ ಮಾಡಿ ನನ್ನ ಯೋಗ ಕ್ಷೇಮವನ್ನು ವಿಚಾರಿಸಿ ತಮ್ಮ ಸ್ವಂತ ಖರ್ಚಿನಲ್ಲೇ ದೆಹಲಿಯಿಂದ ಬೆಂಗಳೂರುವರೆಗೆ ವಿಮಾನದಲ್ಲಿ ಬರುವುದಕ್ಕೆ ವ್ಯವಸ್ಥೆ ಹಾಗೂ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ನನ್ನನ್ನು ಕರೆಸಿಕೊಂಡಿದ್ದಾರೆ ಅವರಿಗೆ ಅನಂತ ಅನಂತ ಧನ್ಯವಾದಗಳು ಎಂದು ಜಬಿಉಲ್ಲಾ ಎಂ.ಎ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















