Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯ ಶಿಕ್ಷಕ ಹಾಗೂ ಮಗುವಿನ ಆರೋಗ್ಯ ವಿಚಾರಿಸಿದ ಶಾಸಕ ರಘುಮೂರ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ನಿನ್ನೆ ತುರುವನೂರು ಹೋಬಳಿಯ ಹುಣಸೇಕಟ್ಟೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗೆ ನಾಗರ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಮತ್ತು ಮುಖ್ಯೋಪಾಧ್ಯಾಯರ ಆರೋಗ್ಯ ವಿಚಾರಿಸಿದರು.

ನಿನ್ನೆ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಹುಣಸೇಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿಗೌಡ ಎಂಬ ವಿದ್ಯಾರ್ಥಿಗೆ ನಾಗರ ಹಾವು ಕಚ್ಚಿದ ಪರಿಣಾಮವಾಗಿ ಹಾಗೂ ಆ ವಿದ್ಯಾರ್ಥಿನಿಯನ್ನು ರಕ್ಷಿಸಿ ಸಮಯ ಪ್ರಜ್ಞೆ ಮೆರೆದು ತತಕ್ಷಣ ಪ್ರಥಮ ಚಿಕಿತ್ಸೆ ನೀಡಿ ವಿದ್ಯಾರ್ಥಿನಿಯ ಜೀವ ಉಳಿಸಿದ ಶಾಲೆಯ ಮುಖ್ಯೋಪಾಧ್ಯಾಯರಾದ ರವಿಶಂಕರ್ ಅವರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now