ಜೆಡಿಎಸ್ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಶಾಸಕ ಟಿ.ಕೃಷ್ಣಪ್ಪ ಚಾಲನೆ

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಪಕ್ಷ ಗಟ್ಟಿಯಾಗಿ ಉಳಿಯಬೇಕಾದರೆ ಸದಸ್ಯತ್ವ ನೊಂದಣಿಯನ್ನು ಗಂಭೀರವಾಗಿ ತಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಹಾಗೂ ತುರುವೆಕೆರೆ ಶಾಸಕ ಟಿ.ಕೃಷ್ಣಪ್ಪ ಕಾರ್ಯಕರ್ತರುಗಳಿಗೆ ಕರೆ ನೀಡಿದರು.

ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಉದ್ಗಾಟಿಸಿ ಮಾತನಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳನ್ನು ಜೊತೆಯಲ್ಲಿ ಕರೆದುಕೊಂಡು ತಾಲ್ಲೂಕು ಅಧ್ಯಕ್ಷರುಗಳು ಸದಸ್ಯತ್ವ ನೊಂದಣಿಗೆ ಪ್ರತಿ ಗ್ರಾಮಗಳಿಗೆ ಹೋಗಿ. ಮುಂಬರುವ ಚುನಾವಣೆಗಳಲ್ಲಿ ಅಭ್ಯರ್ಥಿಗಳಾಗಬಯಸುವವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗಟ್ಟಿಯಾಗಿ ಬೆಳೆದು ಒಂದು ವೇಳೆ ಪಕ್ಷದ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲ್ಲುವಷ್ಟು ಸಾಮಥ್ರ್ಯವಿಟ್ಟುಕೊಳ್ಳಬೇಕೆಂದು ಹೇಳಿದರು.

ಸಾಮಾನ್ಯ ಕಾರ್ಯಕರ್ತರನ್ನು ಪಕ್ಷ ಗುರುತಿಸುವಂತಾಗಬೇಕು. ರಾಜ್ಯದಲ್ಲಿ ಅನೇಕ ಸಮಸ್ಯೆ, ಸವಾಲುಗಳಿವೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿ

ಜನಸಾಮಾನ್ಯರು ತತ್ತರಿಸುವಂತೆ ಮಾಡಿರುವುದರ ವಿರುದ್ದ ಹೋರಾಡಬೇಕು. ಹೊರಗಿನಿಂದ ಇಲ್ಲಿಗೆ ಅಭ್ಯರ್ಥಿಗಳಾಗಿ ಬಂದು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಡುವ ಬದಲು ಸ್ಥಳೀಯರೆ ಪಕ್ಷದಲ್ಲಿ ಗಟ್ಟಿಯಾಗಿ ನಿಂತು ಗೆಲ್ಲುವಂತಾಗಬೇಕು. ಕಾರ್ಯಕರ್ತರಲ್ಲಿಯೇ ಓಟು ಇರುವುದರಿಂದ ಪ್ರವಾಸ ಮಾಡಿ ಸಭೆಗಳನ್ನು ನಡೆಸಿ ಸದಸ್ಯತ್ವ ನೊಂದಣಿಯನ್ನು ಮಾಡಿಸಿ ಎಂದು ತಾಕೀತು ಮಾಡಿದರು.

ಕಾಂಗ್ರೆಸ್‍ನಲ್ಲಿ ಮೂರು ಭಾಗವಾಗಿದೆ. ಕಾರ್ಯಕರ್ತರು ಬೆಳೆದು ಗುರುತಿಸಿಕೊಳ್ಳಲು ಇದು ಸದವಕಾಶ. ಪಕ್ಷದಲ್ಲಿ ಗಟ್ಟಿತನವಿದ್ದಾಗ ಎಲ್ಲರೂ ಬಗ್ಗುತ್ತಾರೆ. ಕಾಂಗ್ರೆಸ್‍ನಿಂದ ಸಮಾಜ ಹಾಳಾಗುತ್ತಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಅದಕ್ಕಾಗಿ ಮೈಕ್ರೋ ಫೈನಾನ್ಸ್ ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯಿಸಿದ್ದೆ ಎಂದರು.

ಮಾಜಿ ಶಾಸಕ ತುಮಕೂರಿನ ಹೆಚ್.ನಿಂಗಯ್ಯ ಮಾತನಾಡಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಬರುತ್ತಿದೆ. ಕಾರ್ಯಕರ್ತರು ಬಲಿಷ್ಟವಾದಾಗ ಪಕ್ಷಕ್ಕೆ ಬೆಲೆ ಬರುತ್ತದೆ. ಜೆಡಿಎಸ್. ಬಿಜೆಪಿ. ಮೈತ್ರಿಯಾಗಿದೆಯೆ ವಿನಃ ವಿಲೀನಗೊಂಡಿಲ್ಲ. ತಾಲ್ಲೂಕು ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು ಸಕ್ರಿಯವಾಗಿ ಸದಸ್ಯತ್ವ ನೊಂದಣಿಯಲ್ಲಿ ತೊಡಗಿಕೊಳ್ಳಿ. ಮಹಿಳೆಯರು ಯುವಕರಿಗೆ ಆದ್ಯತೆ ನೀಡಿ. ಚುನಾವಣೆಯಲ್ಲಿ ಸೋತಿದ್ದೇವೆಂದು ಯಾರು ವಿಚಲಿತರಾಗುವುದು ಬೇಡ. ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರಿ. ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸಿದಾಗ ಎಲ್ಲಾ ಚುನಾವಣೆಗಳನ್ನು ಸುಲಭವಾಗಿ ಗೆಲ್ಲಬಹುದು ಎಂದು ಹೇಳಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡುತ್ತ ಚುನಾವಣೆ ಸಂದರ್ಭದಲ್ಲಿ ಪಕ್ಷದ ನಾಯಕರುಗಳು ಯಾರನ್ನು ಮಾತನಾಡಿಸುವುದಿಲ್ಲ. ಹೊರಗಿನಿಂದ ಬಂದವರು ಇಲ್ಲಿ ಚುನಾವಣೆಗೆ ಸ್ಪರ್ಧಿಸುವುದು ನಮಗೆ ಬೇಸರವೆನಿಸುತ್ತದೆ. ಪಕ್ಷದಲ್ಲಿ ಕೆಲವೊಂದು ಬದಲಾವಣೆಗಳಾಗಬೇಕು. ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಂಡವರನ್ನು ಚುನಾವಣೆಯಲ್ಲಿ ಗಣನೆಗೆ ತೆಗೆದುಕೊಳ್ಳಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಕಾರ್ಯಕರ್ತರಲ್ಲಿ ಶಕ್ತಿ, ವಿಶ್ವಾಸ ಮೂಡಿಸಿದಂತಾಗುತ್ತದೆಂದು ಸಲಹೆ ನೀಡಿದರು.

ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಡಿ.ಯಶೋಧರ ಮಾತನಾಡಿ ಸೈದ್ದಾಂತಿಕ ತಳಹದಿ ಮೇಲೆ ಪಕ್ಷ ಕಟ್ಟಬೇಕಾಗಿರುವುದರಿಂದ ಪ್ರತಿ ಬೂತ್‍ಗಳಿಗೆ ತಾಲ್ಲೂಕು ಅಧ್ಯಕ್ಷರುಗಳು ಹೋಗಿ ಸದಸ್ಯತ್ವ ನೊಂದಣಿಯಲ್ಲಿ ತೊಡಗಿಕೊಳ್ಳಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕಾದರೆ ಸದಸ್ಯತ್ವ ನೊಂದಣಿಯಾಗಬೇಕು. ಪಕ್ಷ ಅಲುಗಾಡಲು ಅವಕಾಶ ಕೊಡುವುದು ಬೇಡ. ಆಂದೋಲನದ ರೀತಿಯಲ್ಲಿ ಸದಸ್ಯತ್ವ ನೊಂದಾಯಿಸಿ ಪ್ರತಿ ಮತಗಟ್ಟೆಗಳಿಗೆ ಹೋಗಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಜೆಡಿಎಸ್.ಜಿಲ್ಲಾಧ್ಯಕ್ಷ ಜಯಣ್ಣ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿ ರವೀಂದ್ರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸ್ರುಲ್ಲಾ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್‍ಜೋಗಿ, ವಕೀಲ ಶಿವಶಂಕರ್, ಮಂಜುನಾಥ್, ಶಂಕರ್‍ಮೂರ್ತಿ, ಹನುಮಂತರಾಯ, ಸಣ್ಣತಿಮ್ಮಣ್ಣ, ಪರಮೇಶ್, ಗಣೇಶ್ ಇವರುಗಳು ವೇದಿಕೆಯಲ್ಲಿದ್ದರು.

 

suddionenews

Recent Posts

ತಂತ್ರಜ್ಞಾನ ಆಧಾರಿತ ಭೋದನಾ ಸಾಧನಗಳನ್ನು ಅಳವಡಿಸಿಕೊಳ್ಳಿ : ಎನ್.ಆರ್. ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಶ್ರೀಧರ್, ತುರುವನೂರು ಮೊ: 78997 89545 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 :…

55 minutes ago

AI ತಂತ್ರಜ್ಞಾನಗಳಿಂದ ಜಗತ್ತು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ : ಪ್ರಧಾನಿ ಮೋದಿ

ಸುದ್ದಿಒನ್ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ AI ಕ್ರಿಯಾ ಶೃಂಗಸಭೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ…

3 hours ago

ಸರ್ಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

  ಗುಬ್ಬಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ…

4 hours ago

ವೀಲ್ ಚೇರ್ ನಲ್ಲಿ ಬಂದ ಸಿಎಂ: ಸಿದ್ದರಾಮಯ್ಯ ಅವರ ಆರೋಗ್ಯ ಈಗ ಹೇಗಿದೆ..?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿನೋವು ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೆರಡು…

4 hours ago

ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

    ಚಿತ್ರದುರ್ಗ. ಫೆ.11: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ…

4 hours ago

ಸೈಬರ್ ಮೋಸದ ಜಾಲಕ್ಕೆ ಸಿಲುಕಬೇಡಿ : ಜಿಪಂ ಸಿಇಒ ಸೋಮಶೇಖರ್

    ಚಿತ್ರದುರ್ಗ. ಫೆ.11: ದೇಶದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಅಂತರ್ಜಾಲದಲ್ಲಿ ವಂಚನೆ ಮಾಡುವವರು ಕೂಡ ಹೆಚ್ಚಾಗುತ್ತಿದ್ದು, ಹೀಗಾಗಿ ಎಚ್ಚರ…

4 hours ago