Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಾಸಕ ಟಿ. ರಘುಮೂರ್ತಿ ಅವಿರೋಧ ಆಯ್ಕೆ!

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 29 : ಕೋಟೆನಾಡು ಚಿತ್ರದುರ್ಗದ ಜಿಲ್ಲಾ ಕೇಂದ್ರ ಸಹಕಾರಿ (CDCC) ಬ್ಯಾಂಕ್‌ನ ನೂತನ ಸಾರಥಿ ಯಾರಾಗಲಿದ್ದಾರೆ ಎಂಬ ತೀವ್ರ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಚಳ್ಳಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ. ರಘುಮೂರ್ತಿ ಅವರು ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

​ರಘುಮೂರ್ತಿ ಕೈಹಿಡಿದ ಸುಧಾಕರ್ ಬಣ :
​ಚಿತ್ರದುರ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳು ಸೇರಿದಂತೆ ಒಟ್ಟು 14 ನಿರ್ದೇಶಕರ ಬಲವಿದೆ. ಈ ಪೈಕಿ ಗರಿಷ್ಠ ಸಂಖ್ಯೆಯ ನಿರ್ದೇಶಕರು ಈಗಾಗಲೇ ರಘುಮೂರ್ತಿ ಅವರಿಗೆ ಜೈ ಎಂದಿದ್ದಾರೆ.

​ಮುಖ್ಯವಾಗಿ, ದಿವಂಗತ ನಾಯಕ ಡಿ. ಸುಧಾಕರ್ ಅವರ ನಿಷ್ಠಾವಂತ ನಿರ್ದೇಶಕರ ದಂಡು ಈಗ ಸಂಪೂರ್ಣವಾಗಿ ರಘುಮೂರ್ತಿ ಅವರ ಕೈ ಹಿಡಿದಿದೆ. ಸುಧಾಕರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರಘುಮೂರ್ತಿ ಅವರ ಕಾರ್ಯವೈಖರಿಗೆ ಇಡೀ ಬಣ ಮನಸೋತಿದೆ. ಈ ಹಿಂದೆ ಡಿ. ಸುಧಾಕರ್ ಅವರು ಸಹ ಚಳ್ಳಕೆರೆ ತಾಲೂಕಿನಿಂದಲೇ ಸ್ಪರ್ಧಿಸಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಸುದೀರ್ಘ ಕಾಲ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದರು. ಈಗ ಅದೇ ಹಾದಿಯಲ್ಲಿ ರಘುಮೂರ್ತಿ ಅವರು ಹೆಜ್ಜೆ ಇಟ್ಟಿರುವುದು ವಿಶೇಷ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now