Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಾಸಕ ಟಿ.ರಘುಮೂರ್ತಿಗೆ ನಿಗಮ ಮಂಡಳಿ ಬದಲಾಗಿ ಸಚಿವ ಸ್ಥಾನ ನೀಡಿ :  ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.27 : ಚಳ್ಳಕೆರೆ ಕ್ಷೇತ್ರದಿಂದ ಸತತವಾಗಿ ಮೂರನೆ ಬಾರಿಗೆ ಗೆದ್ದು ಅಭಿವೃದ್ದಿಯ ಹರಿಕಾರ ಎಂದೆ ಹೆಸರುಗಳಿಸಿರುವ ಟಿ.ರಘುಮೂರ್ತಿಗೆ ನಿಗಮ ಮಂಡಳಿ ಸ್ಥಾನಕ್ಕೆ ಬದಲಾಗಿ ಸಚಿವ ಸ್ಥಾನ ನೀಡಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2018 ರ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕಡೆ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಾಗ ಚಳ್ಳಕೆರೆಯ ಏಕೈಕ ಶಾಸಕರಾಗಿ ಕಾಂಗ್ರೆಸ್‍ನ ಮರ್ಯಾದೆ ಕಾಪಾಡಿದ ಶಾಸಕ ಟಿ.ರಘುಮೂರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಲ್ಲದ ಊಟ ಕೊಟ್ಟಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ ಕೆ.ಟಿ.ಶಿವಕುಮಾರ್ ಜಿಲ್ಲೆಯ ನಾಡಿಮಿಡಿತ ಗೊತ್ತಿರುವ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಆಗ್ರಹಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಕಾರ್ಯದರ್ಶಿ ಜಗದೀಶ್ ಸಿ. ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್. ನಗರಾಧ್ಯಕ್ಷ ಅವಿನಾಶ್ ಎಸ್. ರಾಜಣ್ಣ, ಪ್ರದೀಪ, ಹರೀಶ್, ಸುರೇಶ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...