ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.27 : ಚಳ್ಳಕೆರೆ ಕ್ಷೇತ್ರದಿಂದ ಸತತವಾಗಿ ಮೂರನೆ ಬಾರಿಗೆ ಗೆದ್ದು ಅಭಿವೃದ್ದಿಯ ಹರಿಕಾರ ಎಂದೆ ಹೆಸರುಗಳಿಸಿರುವ ಟಿ.ರಘುಮೂರ್ತಿಗೆ ನಿಗಮ ಮಂಡಳಿ ಸ್ಥಾನಕ್ಕೆ ಬದಲಾಗಿ ಸಚಿವ ಸ್ಥಾನ ನೀಡಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2018 ರ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕಡೆ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಾಗ ಚಳ್ಳಕೆರೆಯ ಏಕೈಕ ಶಾಸಕರಾಗಿ ಕಾಂಗ್ರೆಸ್‍ನ ಮರ್ಯಾದೆ ಕಾಪಾಡಿದ ಶಾಸಕ ಟಿ.ರಘುಮೂರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಲ್ಲದ ಊಟ ಕೊಟ್ಟಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ ಕೆ.ಟಿ.ಶಿವಕುಮಾರ್ ಜಿಲ್ಲೆಯ ನಾಡಿಮಿಡಿತ ಗೊತ್ತಿರುವ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಆಗ್ರಹಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಕಾರ್ಯದರ್ಶಿ ಜಗದೀಶ್ ಸಿ. ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್. ನಗರಾಧ್ಯಕ್ಷ ಅವಿನಾಶ್ ಎಸ್. ರಾಜಣ್ಣ, ಪ್ರದೀಪ, ಹರೀಶ್, ಸುರೇಶ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









