Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿ ಬಂಧನ : ಕೋರ್ಟ್ ನಲ್ಲಿ ಇಂದು ಏನಾಯಿತು ? 

---Advertisement---

 

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಶಾಸಕರ ಮನೆಯ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಯನ್ನ ವಶಕ್ಕೆ ಪಡೆದುಕೊಂಡಿದ್ದರು. ಆನ್ಲೈನ್ ಗೇಮಿಂಗ್ ಆಪ್ ಗಳಿಗೆ ಅಕ್ರಮ ಹಣ ವರ್ಗಾವಣೆಯ ಆರೋಪ ಇತ್ತು. ಇಂದು ಕೋರ್ಟ್ ಮುಂದೆ ವೀರೇಂದ್ರ ಪಪ್ಪಿಯನ್ನ ಹಾಜರುಪಡಿಸಲಾಗಿತ್ತು. ವಾದ – ಪ್ರತಿವಾದ ಆಲಿಸಿದ ಕೋರ್ಟ್ ಇಡಿಗೆನೆ ತರಾಟೆ ತೆಗೆದುಕೊಂಡಿದೆ. ಹಾಗಾದ್ರೆ ಕೋರ್ಟ್ ನಲ್ಲಿ ನಡೆದ ವಾದ ಪ್ರತಿವಾದ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಜಡ್ಜ್ ಗಜಾನನ ಭಟ್ ಪೀಠದಲ್ಲಿ ವಿಚಾರಣೆ‌ ನಡೆದಿದೆ. ವೀರೇಂದ್ರ ಪಪ್ಪಿ ಅವರಿಗೆ ನಿದ್ದೆ ಮಾಡುವುದಕ್ಕೆ ಸಮಯ ಕೊಡಬೇಕು, ಶುದ್ಧ ಕುಡಿಯುವ ನೀರು, ಔಷಧ, ವಿಶ್ರಾಂತಿಗೆ ಅವಕಾಶ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕೋರ್ಟ್ ಆದೇಶ ನೀಡಿದೆ. ಜೊತೆಗೆ 30 ನಿಮಿಷಗಳ ಕಾಲ ವಕೀಲರ ಜೊತೆಗೆ ಮಾತನಾಡುವುದಕ್ಕೂ ಸಮಯಾವಕಾಶ ನೀಡುವಂತೆ ಸೂಚಿಸಿದೆ.

ಶಾಸಕ ವೀರೇಂದ್ರ ಪಪ್ಪಿ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಮತ್ತೆ 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಇಡಿ ಪರ ವಕೀಲರಾದ ಎಸ್ಪಿಪಿ ಪ್ರಮೋದ್ ಚಂದ್ರ ವಾದ ಮಂಡಿಸಿದರು. ಇದಕ್ಕೆ ಆಕ್ಷೇಪಿಸಿದ ವೀರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ, ಇಡಿ ಅಧಿಕಾರಿ ಯಾವುದೇ ಸೌಲಭ್ಯ ನೀಡದೆ ಕಿರುಕುಳ ನೀಡಿದ್ದಾರೆ. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಇಡಿ ಬುದ್ಧಿ ಹೇಳಿದ ಕೋರ್ಟ್, ವೀರೇಂದ್ರ ಪಪ್ಪಿ ಅವರಿಗೆ ಮತ್ತೆ ಆರು ದಿನಗಳ ಕಾಲ‌ ಕಸ್ಟಡಿಗೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment