Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಶಾಸಕ ವೀರೇಂದ್ರ ಪಪ್ಪಿ ಬಂಧನ : ಕ್ಯಾಸಿನೋ ಮೇಲೂ ದಾಳಿ, ಇಂದಿನ ಅಪ್ಡೇಟ್ ಇಲ್ಲಿದೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಬೆಟ್ಟಿಂಗ್ ಆಪ್ ಗಳಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವೀರೇಂದ್ರ ಪಪ್ಪಿಯ ಮನೆ, ಕಚೇರಿ ದಾಳಿ ನಡೆಸಿ, ಕೋಟ್ಯಾಂತರ ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಸಿಕ್ಕಿಂನ ರಾಜಧಾನಿ ಗ್ಯಾಂಗ್ಟಾಕ್ ನಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಟ್ರಾನ್ಸಿಟ್ ರಿಮಾಂಡ್ ಪಡೆಯಲಾಯ್ತು ಎಂದು ಇಡಿ ತಿಳಿಸಿದೆ.

ಚಿತ್ರದುರ್ಗ, ಹುಬ್ಬಳ್ಳಿ, ಬೆಂಗಳೂರು, ಜೋಧ್ ಪುರ, ಸಿಕ್ಕಿಂ, ಮುಂಬೈ ಮತ್ತು ಗೋವಾ ಸೇರಿದಂತೆ ಒಟ್ಟು 31 ಸ್ಥಳಗಳಲ್ಲಿ ತನಿಖಾ ಸಂಸ್ಥೆಯು ಶೋಧ ಕಾರ್ಯವನ್ನು ಮುಕ್ತಾಯಗೊಳಿಸಿದೆ. ಪಪ್ಪೀಸ್ ಕ್ಯಾಸಿನೋ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೋ, ಪಪ್ಪೀಸ್ ಕ್ಯಾಸಿನೋ ಪ್ರೈಡ್, ಓಷನ್ 7 ಕ್ಯಾಸಿನೋ ಮತ್ತು ಬಿಗ್ ಡ್ಯಾಡಿ ಕ್ಯಾಸಿನೋ ಎಂಬ ಹೆಸರಿನ ಗೋವಾದ ಐದು ಕ್ಯಾಸಿನೊಗಳ ಮೇಲೆಯೂ ದಾಳಿ ನಡೆಸಲಾಗಿದೆ.

ಇಡಿ ಪ್ರಕಾರ, ವೀರೇಂದ್ರ ಅವರು King567, Raja567, Puppy’s003, Rathna Gaming ಮುಂತಾದ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ ಮತ್ತು ಅವರ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟೆಕ್, TRS ಟೆಕ್ನಾಲಜೀಸ್ ಮತ್ತು ಪ್ರೈಮ್9ಟೆಕ್ನಾಲಜೀಸ್ ಎಂಬ ಮೂರು ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಗಳು ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಪಟ್ಟಿವೆ ಎಂದು ಆರೋಪಿಸಲಾಗಿದೆ. ಸದ್ಯ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿ, ವಿಚಾರಣೆಯನ್ನು ನಡೆಸುತ್ತಿದ್ದಾರೆ. ವಶಪಡಿಸಿಕೊಂಡ ದಾಖಲೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯುವ ಸಾಧ್ಯತೆ ಇದೆ.

Join WhatsApp

Join Now

Join Telegram

Join Now

Leave a Comment