Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ..!

---Advertisement---

ಬೆಂಗಳೂರು: ವಿನಯ್ ಕುಲಕರ್ಣಿ ಇದೀಗ ಅಪರಾಧಿಯಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಎರಡು ವರ್ಷಕ್ಕಿಂತ ಮೇಲ್ಪಟ್ಟು ಶಿಕ್ಷೆಯಾದರೇನೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾರಣ, ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗಿದೆ. ಈಗ ಧಾರವಾಡ ಕ್ಷೇತ್ರ ಖಾಲಿಯಾಗಿದೆ. ಏಪ್ರಿಲ್ 15ರಿಂದಲೇ ಜಾರಿಯಾಗುವಂತೆ ಶಾಸಕ ಸ್ಥಾನವನ್ನು ರದ್ದು ಮಾಡಲಾಗಿದೆ.

ನ್ಯಾಯಾಲಯದಿಂದ ಕೊ*** ಆರೋಪ ಸಾಬೀತಾಗಿ ಶಿಕ್ಷೆಗೆ ಗುರಿಯಾಗಿರುವ ಕಾರಣ ಏಪ್ರಿಲ್ 15 ರಿಂದಲೇ ಶಾಸಕ ಸ್ಥಾನವನ್ನು ರದ್ದು ಮಾಡಲಾಗಿದೆ. ಒಂದು ವೇಳೆ ನ್ಯಾಯಾಲಯಕ್ಕೆ‌ ಮೇಲ್ಮನವಿ ಸಲ್ಲಿಸಿದ ಮೇಲೂ ಶಿಕ್ಷೆಗೆ ತಡೆಯಾಜ್ಞೆ ಸಿಗದೆ ಹೋದಲ್ಲಿ, ಅಥವಾ ಶಿಕ್ಷೆ ರದ್ದಾಗದೆ ಇದ್ದಲ್ಲಿ, ಜೈಲಿನಿಂದ ಬಿಡುಗಡೆಯಾದ ಸಂದರ್ಭದಲ್ಲೂ ಸುಮಾರು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಇರುವುದಿಲ್ಲ. ನ್ಯಾಯಾಲಯವೂ ಜೀವಾವಧಿ ಶಿಕ್ಷೆ ವಿಧಿಸಿದ ಕಾರಣ ಧಾರವಾಡ ಜಿಲ್ಲೆಯ ಶಾಸಕ ಸ್ಥಾನ ರದ್ದಾಗಿದೆ.

2016ರಲ್ಲಿ ನಡೆದ ಕೊ *** ಪ್ರಕರಣ ಇದಾಗಿದೆ. ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡನ ಕೊಲೆಯಾಗಿತ್ತು. ಯಾವುದೋ ಜಮೀನಿನ ವಿಚಾರಕ್ಕೆ ಜಿಮ್ ಒಂದರಲ್ಲಿ ಯೋಗೀಶ್ ಗೌಡನ ಬರ್ಬರ ಹತ್ಯೆ ಮಾಟಲಾಗಿತ್ತು. ಅದರಲ್ಲಿ A15ನೇ ಆರೋಪಿಯಾಗಿ ವಿನಯ್ ಕುಲಕರ್ಣಿ ಇದ್ದರು. ಹತ್ತು ವರ್ಷಗಳ ಬಳಿಕ ಈ ಕೊ**** ಕೇಸಿನ ಆರೋಪಿಗಳಿಗೆ ಶಿಕ್ಷೆಯಾಗಿದೆ. ಎಲ್ಲರಿಗೂ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿದೆ. ಯೋಗೀಶ್ ಗೌಡ ಅವರ ಕುಟುಂಬಸ್ಥರು ತೀರ್ಪು ಬಂದ‌ ಮೇಲೆ ಸಾಕಷ್ಟು ಖುಷಿ ಪಟ್ಟಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now