ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ : ಸುಪ್ರೀಂ ಕೋರ್ಟ್ ಹೇಳಿದ್ದೇನು..?

1 Min Read

ನವದೆಹಲಿ: ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ದೊಡ್ಡಮಟ್ಟದ ಶಾಕ್ ಎದುರಾಗಿದೆ. ಗ್ರಾಮ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ಅರ್ಜಿಯನ್ನ ಸುಪ್ರೀಂ ಕೋರ್ಟ್ ಪುರದ್ಕರಿಸಿದ್ದು, ಸಾಕ್ಷಿ ನಾಶ ಕೇಸನ್ನ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ಸಾಕ್ಷಿ ನಾಶ ಪ್ರಕರಣವನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಆದರೆ ಇದನ್ನ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಧಾರವಾಡಕ್ಕೆ ಅವರಿಗೆ ಎಂಟ್ರಿ ಇರಲಿಲ್ಲ. ಆದರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಬಳಿಕ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಗಿ ಬಂತು. ಸಿಬಿಐ ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯಲ್ಲಿನ ವಿಚಾರವನ್ನ ಕೋರ್ಟ್ ಎತ್ತಿ ಹಿಡಿದಿದೆ.

ಜೈಲು ಸೇರಿದ ಬಳಿಕ ವಿನಯ್ ಕುಲಕರ್ಣಿ ಮಗನ ಆರೋಗ್ಯ ಪರಿಸ್ಥಿತಿ ಸರಿ ಇರಲಿಲ್ಲ. ಸರ್ಜರಿ ಮಾಡಬೇಕು ಎಂದು ವೈದ್ಯರು ಸೂಚನೆ ನೀಡಿದ್ದರು. ಹೀಗಾಗಿ 20 ದಿನಗಳ ಕಾಲ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಿದ್ದರು. ಬಳಿಕ ಆಸ್ಪತ್ರೆ ಕೆಲಸವನ್ನೆಲ್ಲ ಮುಗಿಸಿಕೊಂಡು ಮತ್ತೆ ಜೈಲುಗೆ ವಾಪಾಸ್ ಬಂದಿದ್ದಾರೆ. ಈಗ ಸಾಕ್ಷಿ ನಾಶ ಮಾಡಿದ್ದರ ಅರ್ಜಿಯನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

Share This Article