Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ತಾಲೂಕಿನ 8 ಕೆರೆಗಳನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಸೇರಿಸಲು ಶಾಸಕ ವೀರೇಂದ್ರ ಪಪ್ಪಿ ಮನವಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 25 :  ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 08 ಕೆರೆಗಳನ್ನು ಸೇರಿಸಿ, ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಎಂದು ಶಾಸಕ ವೀರೇಂದ್ರ ಪಪ್ಪಿ ಮನವಿ ಮಾಡಿದರು.

ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆ ಕಳೆದ 80 ವರ್ಷಗಳಲ್ಲಿ 60 ವರ್ಷ ಬರಗಾಲ ಕಂಡಿದೆ. ಹೀಗಾಗಿ ಇಲ್ಲಿನ ಜನರ ಬದುಕು ಹಸನಾಗಿಸಲು, ಭದ್ರಾ ಮೇಲ್ದಂಡೆ ಯೋಜನೆಯಡಿ, ಚಿತ್ರದುರ್ಗ ತಾಲ್ಲೂಕಿನ 08 ಕೆರೆಗಳು ಕೈಬಿಟ್ಟುಹೋಗಿವೆ. ಆದ್ದರಿಂದ 08 ಕೆರೆಗಳನ್ನು ಸೇರಿಸಿ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಬೇಕು. ಚಿತ್ರದುರ್ಗ ನಗರ ದಿನೇ ದಿನೇ ಬೆಳೆಯುತ್ತಿದ್ದು ವಿ.ವಿ. ಸಾಗರದಿಂದ ಮತ್ತೊಂದು ಹೊಸ ಪೈಪ್ ಲೈನ್ ಮೂಲಕ ಕುಡಿಯುವ ನೀರು ಪೂರೈಸುವ ಯೋಜನೆ ಮಂಜೂರು ಮಾಡಿ, ಅನುಮೋದನೆ ನೀಡಲು ಮನವಿ ಮಾಡಿದರು. ಹಾವೇರಿಯಲ್ಲಿ ಮೋಡಬಿತ್ತನೆ ಮಾಡಿದ್ದು, ಯಶಸ್ವಿಯಾಗಿದೆ. ಅದೇ ರೀತಿ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ಮಾಡಲು ಅವಕಾಶ ಮಾಡಿಕೊಡಲು ಮನವಿ ಮಾಡಿದರು.

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now