ಬೆಂಗಳೂರು: ಹೊಸ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಉಳಿದವರು ಕೂಡ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ. ಹೀಗೆ ಪ್ರಮಾಣವಚನ ಸ್ವೀಕಾರ ಮಾಡುವ ವೇಳೆ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
“ಭಗವಂತ ಹಾಗೂ ನನ್ನ ಆರಾಧ್ಯದೈವ ಡಿಕೆ ಶಿವಕುಮಾರ್ ಸಾಹೇಬರ ಮೇಲೆ ಪ್ರಮಾಣ ಮಾಡುತ್ತೇನೆ. ಸತ್ಯ ನಿಷ್ಠೆಯಿಂದ ಕೆಲಸ ಮಾಡುತ್ತೇನೆ” ಎಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೆ ಇತರೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ಕೂಡಲೇ ಗೊಂದಲವನ್ನು ಪರಿಹರಿಸಿದ ಹಂಗಾಮಿ ಸ್ಪೀಕರ್ ದೇಶಪಾಂಡೆ ಅವರು ಸಲಹೆ ನೀಡಿದರು. ವ್ಯಕ್ತಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಬಾರದು ಎಂದು ಕಾರ್ಯದರ್ಶಿ ಮೂಲಕ ತಿಳಿಸಿದರು. ಬಳಿಕ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು.