ಬೆಂಗಳೂರು: ರಾಜಕೀಯದಲ್ಲಿ ಸ್ಥಾನಗಳಿಗಾಗಿ ಗುದ್ದಾಟ ನಡೆಯೋದು ಕಾಮನ್ ಆಗಿದೆ. ಇದೀಗ ಹಲವು ನಿಗಮ ಮಂಡಳಿಯ ಅಧ್ಯಕ್ಷರು, ಸದಸ್ಯ ಸ್ಥಾನಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ. ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರಾಯಚೂರು ಎಪಿಎಂಸಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ, ಪಕ್ಷಕ್ಕಾಗಿ ದುಡಿದವರಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆದ್ರೆ ಈಗ ಜಿಲ್ಲೆಯಲ್ಲಿ ಬಣ ರಾಜಕೀಯದ ಸಂಘರ್ಷ ಶುರುವಾಗಿದೆ. ಜಿಲ್ಲೆಯ ನಾನಾ ನಿಗಮಗಳಿಗೆ ತಮ್ಮ ಹೆಸರು ಸೂಚಿಸುವಂತೆ ಕಾಂಗ್ರೆಸ್ ಆಕಾಂಕ್ಷಿಗಳು ಬೆಂಗಳೂರಿಗೆ ಆಗಮಿಸಿದ್ದು ಪ್ರಭಾವಿ ನಾಯಕರ ಮನೆಗೆ ಭೇಟಿ ನೀಡುತ್ತಿದ್ದಾರೆ.
ಜಿಲ್ಲೆಯಲ್ಲಿ ಹಲವು ಸಮುದಾಯದ ಮುಖಂಡರು ನಮ್ಮ ನಾಯಕರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಎಂದು ಮಾಧ್ಯಮಗಳ ಮೂಲಕವೂ ಒತ್ತಾಯಿಸುತ್ತ ಲಾಭಿ ನಡೆಸಿರುವುದು ಗೋಚರಿಸಿದೆ. ಇನ್ನೂ ಕೆಲವರು ತಮ್ಮ ಕ್ಷೇತ್ರಗಳ ಶಾಸಕರಲ್ಲಿ ಪ್ರೀತಿ ವಿಶ್ವಾಸ ಸಂಪಾದಿಸಿ ನಿಗಮ ಮಂಡಳಿಯಲ್ಲಿ ಸ್ಥಾನ ಪಡೆಯುವ ಪ್ರಯತ್ನ ನಡೆಸಿದ್ದಾರೆ.ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದವರ ಸೇವೆ ಪರಿಗಣಿಸುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…