ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಸುದ್ದಿಒನ್, ಚಿತ್ರದುರ್ಗ, (ನ.20): ವಿಧಾನಪರಿಷತ್ನ 25 ಸ್ಥಾನಗಳಿಗೆ ಮುಂದಿನ ತಿಂಗಳು ಹತ್ತರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಹನುಮಂತಪ್ಪ ದುರ್ಗ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ, ಮಾದಿಗ ಸಮಾಜದ ರಾಜ್ಯಾಧ್ಯಕ್ಷರಾಗಿರುವ ಹನುಮಂತಪ್ಪ ದುರ್ಗ ಹೋರಾಟದ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದು, ವಿಧಾನಪರಿಷತ್ ಚುನಾವಣೆಗೆ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.