Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್? ಸಿಎಂ ಹೊಸ ಪ್ಲಾನ್

---Advertisement---

ರಾಜ್ಯದಲ್ಲಿ ವಿದ್ಯಾರ್ಥಿಗಳ ಮೊಬೈಲ್  ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಕರ್ನಾಟಕ ಸರ್ಕಾರ ಯೋಚನೆ ಮಾಡುತ್ತಿದೆ‌. 16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್‌ನಲ್ಲಿ  ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. ಸೋಶಿಯಲ್ ಮೀಡಿಯಾ ಹಾಗೂ ಮಾದಕ ವಸ್ತುಗಳ ವ್ಯಸನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬಹುದೆಂಬ ಸುಳಿವು ದೊರೆತಿದೆ.

ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ. ಈ ಬಗ್ಗೆ ಸಲಹೆ ನೀಡಿ ಎಂದು ಕುಲಪತಿಗಳಿಂದ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ಕೇಳಿದ್ದಾರೆ.

ಸರ್ಕಾರದ ಯೋಚನೆ ಪ್ರಕಾರ, ಇದು ಎಲ್ಲರಿಗೂ ಅನ್ವಯಿಸುವ ನಿಯಮವಲ್ಲ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ಮತ್ತು ಕಾಲೇಜು ಕ್ಯಾಂಪಸ್ ಒಳಗೆ ಮೊಬೈಲ್ ಬಳಕೆಗೆ ನಿರ್ಬಂಧ ಇರಬಹುದು. ಮನೆ ಅಥವಾ ಹೊರಗೆ ಬಳಕೆಗೆ ಸಂಪೂರ್ಣ ನಿಷೇಧ ಇರುವುದಿಲ್ಲ ಎಂದು ಹೇಳಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...