Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಯುವಕ-ಯುವತಿಯರಿಗೆ ಸುವರ್ಣಾವಕಾಶ; ಜೂ. 27ಕ್ಕೆ ಉಚಿತ ಮೊಬೈಲ್ ರಿಪೇರಿ ತರಬೇತಿ ಸಂದರ್ಶನ

---Advertisement---

ಸುದ್ದಿಒನ್, ಚಿತ್ರದುರ್ಗ. ಜೂನ್. 25: ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ಯುವಕ ಹಾಗೂ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು 30 ದಿನಗಳ ಕಾಲ ಮೊಬೈಲ್ ರಿಪೇರಿ ತರಬೇತಿಗೆ ಇದೇ ಜೂನ್ 27ರಂದು ಸಂದರ್ಶನ ಆಯೋಜಿಸಲಾಗಿದೆ. ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಅಭ್ಯರ್ಥಿಗಳು 19 ರಿಂದ 50 ವರ್ಷಗಳ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಈ ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಸ್ವ-ವಿಳಾಸದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಜೂನ್ 27 ರಂದು ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥಯ ದೂರವಾಣಿ ಸಂಖ್ಯೆ 8431329162, 8618282445, 8660627785 ಕರೆ ಮಾಡುವಂತೆ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೊರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now