Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿ.ವಿ.ಸಾಗರ ನೀರಾವರಿ ಯೋಜನೆ ಹೈಟೆಕ್ ಸ್ಪರ್ಶ, ರೂ.740 ಕೋಟಿ ವೆಚ್ಚದಲ್ಲಿ ಆಧುನೀಕರಣ : ಸಚಿವ ಡಿ.ಸುಧಾಕರ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ. ಆ.16: ಏಷಿಯನ್ ಅಭಿವೃದ್ಧಿ ಬ್ಯಾಂಕ್ ಮೂಲಕ 740 ಕೋಟಿ ರೂ. ವೆಚ್ಚದಲ್ಲಿ ವಾಣಿವಿಲಾಸ ಸಾಗರ ಜಲಾಶಯ, ನಾಲೆಗಳ ಆಧುನೀಕರಣ, ಹನಿ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಇದರಿಂದ ಪ್ರಸ್ತುತ 29 ಸಾವಿರ ಎಕರೆ ಪ್ರದೇಶಕ್ಕೆ ದೊರಕುತ್ತಿರುವ ನೀರಾವರಿ ಸೌಲಭ್ಯ 45 ಸಾವಿರ ಎಕರೆ ಪ್ರದೇಶಕ್ಕೆ ಏರಿಕೆಯಾಗಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಬುಧವಾರ ನಗರದ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಸಭಾಂಗಣದಲ್ಲಿ ಎಷಿಯನ್ ಅಭಿವೃದ್ಧಿ ಬ್ಯಾಂಕ್ ನೆರವಿನಿಂದ ವಾಣಿ ವಿಲಾಸ ಸಾಗರ ನಿರಾವರಿ ಯೋಜನೆ ಆಧುನಿಕರಣ ಹಾಗೂ ನಿರ್ವಹಣೆ ಕುರಿತು ಜರುಗಿದ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಅತ್ಯಂತ ಹಳೆಯದಾದ, ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯವನ್ನು ಕೇಂದ್ರ ಪುರಸ್ಕøತ ಸಪೋರ್ಟ್ ಫಾರ್ ಇರಿಗೇಷನ್ ಮಾಡ್ರನೈಜೇಷನ್ ಪ್ರೋಗ್ರಾಮ್ (ಎಸ್‍ಐಎಮ್‍ಪಿ) ಅಡಿ ಕೈಗೊಳ್ಳಲು ರಾಜ್ಯ ಸರ್ಕಾರ ಗುರುತಿಸಿದ್ದು, ಕೇಂದ್ರ ಜಲ ಆಯೋಗವು ಈ ಯೋಜನೆಯನ್ನು ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್ ಅನುದಾನದಡಿ ನಿರ್ವಹಿಸಲಿದೆ.

ಇದರಡಿ 115 ವರ್ಷಗಳಷ್ಟು ಹಳೆಯದಾದ ವಾಣಿವಿಲಾಸ ಸಾಗರ ಅಣೆಕಟ್ಟಿನ ದುರಸ್ಥಿ ಹಾಗೂ ನಾಲಾಗಳ ಆಧುನೀಕರಣ ಕೈಗೊಳ್ಳಲಾಗುವುದು.  ಕಾಲುವೆ ನೀರಾವರಿ ಬದಲಿಗೆ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲಾಗುವುದು.

ಯೋಜನೆಗೆ ಏಷಿಯನ್ ಅಭಿವೃದ್ಧಿ ಬ್ಯಾಂಕ್ ಸಕಾರಾತ್ಮವಾಗಿ ಸ್ಪಂದಿಸಿದೆ. 129 ಕಿ.ಮೀ. ಉದ್ದದ ಕಾಲುವೆಗಳ ಆಧುನೀಕರಣಗೊಳಿಸುವುದರ ಜೊತೆಗೆ, ಜಲಾನಯನ ಅಚ್ಚುಕಟ್ಟು ಪ್ರದೇಶದಲ್ಲಿ 600ಕ್ಕೂ ಹೆಚ್ಚು ಅಂರ್ತಜಲ ಮರುಪೂರಣ ಬಾವಿಗಳು ಹಾಗೂ 7 ಬ್ಯಾರೇಜ್‍ಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಹಿರಿಯೂರು ಪಟ್ಟಣದಲ್ಲಿ ಹಾದು ಹೋಗಿರುವ 3.ಕಿ.ಮೀ ತೆರದ ನಾಲಾವ್ಯವಸ್ಥೆಯನ್ನು, ಮುಚ್ಚಿದ ನಾಲಾ ವ್ಯವಸ್ಥೆಯಾಗಿ ಬದಲಾಯಿಸಲಾಗುವುದು.

ಇದರೊಂದಿಗೆ ಹೆಚ್ಚಿನ ಜನವಸತಿ ಇರುವ ಗ್ರಾಮಾಂತರ ಪ್ರದೇಶಗಳಲ್ಲಿ ಮುಚ್ಚಿದ ನಾಲಾ ವ್ಯವಸ್ಥೆ ನಿರ್ಮಿಸಲಾಗುವುದು. ಜಲಾಶಯದಿಂದ ಹೊರಹೋಗುವ ನದಿ ಪಾತ್ರದಲ್ಲಿ ಅತಿವೃಷ್ಟಿಯಿಂದ ನೀರು ನಗರಕ್ಕೆ ನುಗ್ಗಿ ಅವಾಂತರ ಉಂಟಾಗಿತ್ತು. ಇದರೊಂದಿಗೆ ನದಿಯಲ್ಲಿ ನೀರು ಪೋಲಾಗದಂತೆ ತಡೆಯಲು ತಡೆಗೋಡೆ ನಿರ್ಮಿಸಲಾಗುವುದು.

ವಾಣಿ ವಿಲಾಸ ಸಾಗರ ಅಣೆಕಟ್ಟಿನ ಮುಂಭಾಗದಲ್ಲಿನ 9 ಎಕರೆ ಜಾಗದಲ್ಲಿ ಕೆ.ಆರ್.ಎಸ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಿ, ಸೌಂದರ್ಯಕರಣ ಮಾಡಲಾಗುವುದು. ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಹಾಗೂ ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಗಳನ್ನು ನಿರ್ಮಿಸಲಾಗುವುದು.  ಜಲಾಶಯದ ಹಿನ್ನೀರಿನಲ್ಲಿ ಜಲಕ್ರೀಡೆ ಅಭಿವೃದ್ಧಿಗೊಳಿಸಲು ಕೂಡ ಚಿಂತಿಸಲಾಗಿದೆ ಎಂದರು.

ಜಲಾಶಯಕ್ಕೆ ಕೇಂದ್ರೀಕೃತ ಸ್ವಯಂಚಾಲನಾ ನಿರ್ವಹಣೆ : ಕೇಂದ್ರ ಸಾಮಾಜಿಕ ನಾಯ್ಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅವರು ಮಾತನಾಡಿ, ವಾಣಿವಿಲಾಸ ಸಾಗರ ಜಲಾಶಯದಲ್ಲಿ ಈಗಿರುವ ಸೋರುವಿಕೆಯನ್ನು ತಡೆಯುವುದರ ಜೊತೆಗೆ, ಕಾಲುವೆ ನೀರಾವರಿಯಲ್ಲಿ ನೀರು ಪೋಲಾಗುವುದನ್ನು ತಡೆಯಲು, ಮಾನವ ಚಾಲಿತ ಗೇಟ್‍ಗಳ ಬದಲಿಗೆ ಕೇಂದ್ರಿಕೃತ ಸ್ವಯಂಚಾಲನ ನಿರ್ವಹಣೆ ವ್ಯವಸ್ಥೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ವಾಣಿವಿಲಾಸ ಸಾಗರ ನೀರಾವರಿ ಯೋಜನೆ ಆಧುನೀಕರಣಕ್ಕೆ ರೂ.740 ಕೋಟಿಯನ್ನು ಏಷಿಯನ್ ಅಭಿವೃದ್ಧಿ ಬ್ಯಾಂಕ್ ಮಂಜೂರಾತಿ ನೀಡಿದೆ. ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಜಲಾಶಯ ಹಾಗೂ ಅಚ್ಚುಕಟ್ಟು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಯೋಜನೆಯನ್ನು ಯಶಸ್ವಿಯಾಗಿ ಜಾರಿಮಾಡಲು ತಜ್ಞರ ಸಲಹೆ ಪಡೆಯಲಾಗುತ್ತಿದೆ.

ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್‍ನ ಟೀಮ್ ಲೀಡರ್, ನೀರಾವರಿ ಆಧುನೀಕರಣ ವಿಶೇಷಜ್ಞ ಲಂಡನ್‍ನ ಡೇನಿಯಲ್ ರೆನಾಲ್ಟ್ ಯೋಜನೆಯ ಕಾರ್ಯಸೂಚಿ ಸಿದ್ದಪಡಿಸಲಿದ್ದಾರೆ. ಕೃಷಿ ಹಾಗೂ ಕೇಂದ್ರ ಜಲ ಆಯೋಗ ತಜ್ಞರು ಭೇಟಿ ನೀಡಿ ವಿವರವಾಗಿ ಅಧ್ಯಯನ ಮಾಡುತ್ತಿದ್ದಾರೆ.

ಯೋಜನೆಯಲ್ಲಿ ಹೆಚ್ಚಿನದಾಗಿ ಸೇರಿಸಬೇಕಾದ ಅಂಶಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಾಗೂ ನಾನು ಸಲಹೆ ನೀಡಿದ್ದೇವೆ. ವಿಸ್ತøತ ಯೋಜನೆ ವರದಿಯನ್ನು ಸಿದ್ದಪಡಿಸುವಾಗ ಈ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು. ನೀರು ಪೋಲಾಗುವುದನ್ನು ತಡೆಯುವುದು. ಹನಿ ನೀರಾವರಿ ಪದ್ದತಿ ಅಳವಡಿಕೆ ಹಾಗೂ ಅಂತರ್ಜಲ ವೃದ್ಧಿಯ ಪ್ರಮುಖ ಮೂರು ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಯೋಜನೆ ರೂಪಿಸಲಾಗುತ್ತಿದೆ, ಅಲ್ಲದೆ ಬೆಳೆ ಪದ್ಧತಿ ನಿಗದಿಯ ಬಗ್ಗೆಯೂ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

2012ರ ನಂತರ ಕೇಂದ್ರ ಸರ್ಕಾರ ಯಾವುದೇ ನೀರಾವರಿ ಯೋಜನೆಗಳನ್ನು ರಾಷ್ಟ್ರೀಕೃತ ಯೋಜನೆಯನ್ನಾಗಿ ಘೋಷಿಸಿಲ್ಲ. ಆದರೂ ಭದ್ರಾ ಮೇಲ್ದಂಡೆ ಯೋಜನೆ ಕುರಿತು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಕೇಂದ್ರದ ಆಯವ್ಯಯದಲ್ಲಿ ರೂ.5300 ಕೋಟಿಯನ್ನು ಮೀಸಲಿರಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಇರಿಗೇಷನ್ ಡೆವಲಪ್‍ಮೆಂಟ್ ಬೆನಿಫಿಟೆಡ್ ಪ್ರೋಗ್ರಾಂ ನಡಿ ಜಾರಿಗೊಳಿಸುವ ಕುರಿತು ಪತ್ರ ನೀಡಿದ ಕೂಡಲೇ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪತ್ರ ಸಿದ್ದಪಡಿಸಲಾಗಿದ್ದು, ಶೀಘ್ರವೇ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಪತ್ರ ಸಲ್ಲಿಸಿ, ಯೋಜನೆಗೆ ಅನುದಾನ ಪಡೆಯಲು ಕ್ರಮ ಕೈಗೊಳ್ಳಲಾಗುವುದು.

ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಥಮ ಆದ್ಯತೆಯಲ್ಲಿ ಕೆರೆಗಳನ್ನು ತುಂಬಿಸಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಉತ್ತರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಎಡಿಬಿ ಟೀಮ್ ಲೀಡರ್, ನೀರಾವರಿ ಆಧುನೀಕರಣ ತಜ್ಞ ಡೇನಿಯಲ್ ರೆನಾಲ್ಟ್, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಕೆ.ಎಂ.ಶಿವಪ್ರಕಾಶ್, ರಾಜ್ಯ ಸರ್ಕಾರ ಜಲ ನಿರ್ವಹಣಾ ಕೇಂದ್ರ ಬಿ.ಎಸ್.ರಾವ್ ಇಂಜಿಯರ್ ಎಂ.ಜಿ.ಶಿವಕುಮಾರ್, ನಿವೃತ್ತ ಮುಖ್ಯ ಇಂಜಿನಿಯರ್‍ಗಳಾದ ಚೆಲುವರಾಜ್, ಶಿವಕುಮಾರ್ ಸೇರಿಂದತೆ ಮತ್ತಿರರು ಇದ್ದರು.

ಕೇಂದ್ರ ಜಲ ಆಯೋಗದ ಮುಖ್ಯ ಇಂಜಿನಿಯರ್ ಡೋರ್ಗೆ ಪಿ ಗ್ಯಾಂಬಾ, ಏಷಿಯನ್ ಅಭಿವೃದ್ಧಿ ಬ್ಯಾಂಕ್ ರಾಜೇಶ್ ಯಾದವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉದ್ಯೋಗ ವಾರ್ತೆ | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹುದ್ದೆಗಳ ನೇಮಕ

ಸುದ್ದಿಒನ್, ಬೆಂಗಳೂರು, ಮೇ. 24 :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಒಟ್ಟು 902 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ

ಉದ್ಯೋಗ ವಾರ್ತೆ | ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಅರ್ಜಿ

  ಚಿತ್ರದುರ್ಗ. ಮೇ.24:  ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

  ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು,

error: Content is protected !!