ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಭಾರತದಲ್ಲಿಯೂ ಕಾಣಿಸತೊಡಗಿದ್ದು, ದೇಶದ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕೆಲ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಅದರಲ್ಲಿ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿಯೂ ಪ್ರಮುಖವಾಗಿದೆ.ಈ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರದಲ್ಲಿ ಇಳಿಕೆ ಕಂಡುಬಂದಿದ್ದು, ಮತ್ತೊಂದೆಡೆ ಅಕ್ಕಿ ಬೆಲೆ ಏರಿಕೆಯಾಗಿರುವುದು ಗ್ರಾಹಕರ ಗಮನ ಸೆಳೆದಿದೆ.
ಇತ್ತೀಚೆಗೆ ಪ್ರಧಾನಿ ಮೋದಿ ದೇಶದ ಜನತೆಗೆ ಉದ್ದೇಶಿಸಿ ಮಾತನಾಡಿ, ಆರೋಗ್ಯ ಹಾಗೂ ದೇಶದ ಆರ್ಥಿಕತೆಯ ಹಿತದೃಷ್ಟಿಯಿಂದ ಅಡುಗೆ ಎಣ್ಣೆ ಬಳಕೆಯನ್ನು ಕಡಿಮೆ ಮಾಡುವಂತೆ ವಿಶೇಷವಾಗಿ ಗೃಹಿಣಿಯರಿಗೆ ಮನವಿ ಮಾಡಿದ್ದರು.ಈ ಹೇಳಿಕೆಯ ಬಳಿಕ ಬೆಂಗಳೂರಿನ ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್‌ಗಳ ಅಡುಗೆ ಎಣ್ಣೆ ದರದಲ್ಲಿ ಲೀಟರ್‌ಗೆ 3ರಿಂದ 5 ರೂಪಾಯಿ ತನಕ ಇಳಿಕೆಯಾಗಿದೆ. ಒಂದು ಟಿನ್ ಎಣ್ಣೆಯ ಬೆಲೆಯಲ್ಲಿ 30ರಿಂದ 40 ರೂಪಾಯಿವರೆಗೆ ಕಡಿತ ಕಂಡುಬಂದಿದೆ.
ವ್ಯಾಪಾರಿಗಳ ಪ್ರಕಾರ, ಅಡುಗೆ ಎಣ್ಣೆಯ ಆಮದು ಪ್ರಮಾಣ ಹೆಚ್ಚಳ, ಪೂರೈಕೆ ಸುಧಾರಣೆ ಹಾಗೂ ಪ್ರಧಾನಿ ಮೋದಿ ಅವರ ಮನವಿಯ ಪರಿಣಾಮದಿಂದ ದರ ಇಳಿಕೆಯಾಗಿದೆ.
ಎಣ್ಣೆಯ ವಿಧಹಳೆಯ ದರಹೊಸ ದರಇಳಿಕೆ
ಪಾಮ್ ಆಯಿಲ್
₹143
₹141
₹2 ಇಳಿಕೆ
ಸನ್ ಪ್ಯೂರ್
₹170
₹167
₹3 ಇಳಿಕೆ
ಕಡಲೆಕಾಯಿ ಎಣ್ಣೆ
₹190
₹185
₹5 ಇಳಿಕೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









