ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

suddionenews
1 Min Read

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ಮೋದಿ, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಹಾಗೂ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಪರ ಮತಯಾಚಿಸಿ, ಇಬ್ಬರನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕದ ಬಗ್ಗೆ ಮೋದಿ ಅವರಿಗೆ ಬಹಳ ಕಾಳಜಿ ಇದೆ. ನನಗೂ ಕೂಡ ದೇವೇಗೌಡರ ಆಶೀರ್ವಾದ ಸಿಕ್ಕಿದೆ. ಎನ್ ಐ ಡಿ ಐ ಎ ಒಕ್ಕೂಟ ಇದೆ. ಆದರೆ ಭವಿಷ್ಯದ ಲೀಡರ್ ಇಲ್ಲ. ವಿರೋಧ ಪಕ್ಷಗಳು ಕೇವಲ ಭ್ರಷ್ಟಾಚಾರ. ಕೋಲಾರ ಹಾಗೂ ಚಿಕ್ಕಬಳ್ಳಾಪುರದ ಜನತೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಸಾರಬೇಕು. ನಿಮಗಾಗಿ ನಾನು ಹಗಲು- ರಾತ್ರಿ ದುಡಿಯುತ್ತೇನೆ. ಗ್ಯಾರಂಟಿ ಜೊತೆಗೆ ನಿಮ್ಮ ಮುಂದೆ ಬಂದಿದ್ದೇನೆ. ಎರಡು ಜಿಲ್ಲೆಗಳಿಗೂ ಇಚಿತ ರಂದು ಎಷನ್ ಸಿಗುತ್ತಿದೆ. ಚಿಕ್ಕಬಳ್ಳಾಪುರ ಒಂದರಲ್ಲೇ ಸುಮಾರು ನಾಲ್ಕು ಲಕ್ಷ ಆಯುಷ್ಮಾನ್ ಫಲಾನುಭವಿಗಳಿದ್ದಾರೆ. 70 ವರ್ಷ ದಾಟಿದ 5 ಲಕ್ಷ ಮಂದಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಚಿಕ್ಕಬಳ್ಳಾಪುರದಲ್ಲಿ 14 ಸಾವಿರ ಮತ್ತು ಕೋಲಾರದಲ್ಲಿ 20 ಸಾವಿರ ಮಂದಿಗೆ ಮನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮೂರು ಕೋಟಿ ಮನೆ ನಿರ್ಮಾಣ ಮಾಡಲಾಗುತ್ತದೆ. ಇದು ಮೋದಿ ಗ್ಯಾರಂಟಿ ಎಂದು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *