ಸುದ್ದಿಒನ್
ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಹೆಸರಿಗೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಗುಜರಾತ್ ಹೈಕೋರ್ಟ್‌ನಲ್ಲೂ ಹಿನ್ನಡೆಯಾಗಿದೆ. ಈ ಆದೇಶಕ್ಕೆ ತಡೆ ನೀಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದೆ. ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥರೆಂದು ಸೂರತ್ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಈ ತೀರ್ಪನ್ನು ರಾಹುಲ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.
ಮಾನನಷ್ಟ ಪ್ರಕರಣಕ್ಕೆ ತಡೆ ನೀಡಲು ಸರಿಯಾದ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಂಡಿದ್ದರು.