ಗ್ರಾಮದಿಂದ ಮಹಾನಗರದ ತನಕ ಸಿದ್ಧತೆ ಮಾಡಿಕೊಳ್ಳಿ : ಮಂಗಳೂರಿನಲ್ಲಿ ಮೋದಿ ಕರೆ

 

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡಿದ್ದರು. ಗೋಲ್ಡ್ ಫಿಂಚ್ ಹೊಟೇಲ್ ಮೈದಾನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಶಾಸಕರು, ಸಚಿವರು, ಸಂಸದರು, ಬಿಜೆಪಿ ನಾಯಕರಿಗೆ ಒಂದಷ್ಟು ಸಲಹೆ ಮತ್ತು ಎಚ್ಚರಿಕೆಗಳನ್ನು ನೀಡಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದೆ‌. ಹೀಗಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಇದು ಚುನಾವಣಾ ವರ್ಷವಾಗಿರುವುದರಿಂದ ಶಾಸಕರು ಮತ್ತು ಮಂತ್ರಿಗಳು ರಾಜ್ಯ ಮತ್ತು ಕೇಂದ್ರದ ಯೋಜನೆಯನ್ನು ಮನೆ ಮನೆಗೆ ತಲುಪಿಸಬೇಕು. ಪಕ್ಷ ಸಂಘಟನೆ ಎಂಬುದು ನಿರಂತರ ಪ್ರಕ್ರಿಯೆಯಾಗಿರುತ್ತದೆ. ಗ್ರಾಮದಿಂದ ಹಿಡಿದು ಮಹಾನಗರದವರೆಗೂ ಚುನಾವಣೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಮಿಷನ್ ಬೆಂಗಳೂರು ವಿಚಾರವಾಗಿ ವಿಶೇಷ ಗಮನ ಕೊಡಬೇಕು. ಮೂಲಭೂತ ಸೌಕರ್ಯದ ಕಡೆ ನಿರ್ಲಕ್ಷ್ಯ ಬೇಡ. ರಾಜ್ಯದಲ್ಲಿ 150 ಸ್ಥಾನ ಬರುತ್ತದೆ ಎಂಬ ವಿಶ್ವಾಸ ನಮಗಿದೆ. ಪ್ರತಿ ತಿಂಗಳು ನಾನು ರಾಜ್ಯಕ್ಕೆ ಬರುತ್ತೇನೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಕಾರ್ಯಕ್ರಮಗಳ ಆಯೋಜನೆ ಮಾಡಿ. ಪಕ್ಷಗಳ ಶೇ.40 ಭ್ರಷ್ಟಾಚಾರ ಆರೋಪಕ್ಕೆ ನಾವು ತಕ್ಕ ಉತ್ತರ ನೀಡಬೇಕು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *