Modi on Election Results : ಚುನಾವಣಾ ಫಲಿತಾಂಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಪ್ರತಿಕ್ರಿಯೆ

ಸುದ್ದಿಒನ್, ನವದೆಹಲಿ, ಜೂ.04 : ಲೋಕಸಭೆ ಚುನಾವಣೆ ಫಲಿತಾಂಶ – 2024 ಇಂದು (ಮಂಗಳವಾರ, ಜೂನ್ 4) ಪ್ರಕಟವಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸತತ ಮೂರನೇ ಬಾರಿಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಇದೊಂದು ಐತಿಹಾಸಿಕ ಗೆಲುವು ಎಂದಿದ್ದಾರೆ.

ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕಾರ್ಯವನ್ನು ನಾವು ಮುಂದುವರಿಸುತ್ತೇವೆ ಮತ್ತು ಈ ಅಭಿಮಾನವನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದರು. ಕಷ್ಟಪಟ್ಟು ದುಡಿದ ನಮ್ಮ ಎಲ್ಲ ಕಾರ್ಯಕರ್ತರಿಗೂ ನಾನು ವಂದಿಸುತ್ತೇನೆ. ಅವರ ಅಸಾಧಾರಣ ಸೇವೆಯನ್ನು ಮಾತುಗಳಲ್ಲಿ ಹೇಳಲಾಗದು.

ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ! ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ.

ಈ ಪ್ರೀತಿಗಾಗಿ ನಾನು ಜನತಾ ಜನಾರ್ದನನಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಆಶಯಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *