Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಮೋದಿ ಮಾತುಕತೆ : ಚುನಾವಣೆಯ ಮುನ್ನ ಶಕ್ತಿ ತುಂಬಿದ ಪ್ರಧಾನಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಏ. 27) :  ಇಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವರ್ಚುವಲ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ಇಂದು ಪ್ರಧಾನಿ ವರ್ಚುವಲ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಎ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಜಿಲ್ಲಾದ್ಯಕ್ಷರಾದ ಎ ಮರಳಿ  ಅನ್ಯ ಬಾಷೆ ಸಂಪರ್ಕ ರಾಜ್ಯ ಸಂಚಾಲಕಿ ಕವಿತ ನಾಯಕ್  ಬೂತ್, ಸಮಿತಿ ಮತ್ತು ಪೇಜ್ ಪ್ರಮುಖರು, ಮುಂತಾದವರು ಭಾಗಿಯಾಗಿದ್ದರು.

ಬೂತ್ ಮಟ್ಟದಲ್ಲಿ ಮತದಾರರನ್ನು ಸೆಳೆದು ಮತಗಟ್ಟೆಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸುವ ಕಾರ್ಯಕರ್ತರಲ್ಲಿ ವರ್ಚುವಲ್ ಕಾರ್ಯಕ್ರಮದ ಮೂಲಕ ನೇರವಾಗಿ ಮಾತಾಡಿ ಮತ್ತಷ್ಟು ಹುರಿದುಂಬಿಸಲು ಮೋದಿ ಪ್ಲ್ಯಾನ್ ಮಾಡಿ ಈ ಮೂಲಕ ಚುನಾವಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಕಾರ್ಯಕರ್ತರಿಗೆ ಪ್ರಧಾನಿ ಇಂದು ಭಾಷಣದ ಮೂಲಕ ಟಾನಿಕ್ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕರ್ನಾಟಕದಲ್ಲಿ ಲೋಕತಂತ್ರದ ಉತ್ಸವ ನಡೆಯುತ್ತಿದೆ. ಕರ್ನಾಟಕದ ಬಿಜೆಪಿ ಜಗತ್ತಿಗೆ ಪ್ರಜಾಪ್ರಭುತ್ವದ ಸೂತ್ರಗಳನ್ನು ಹೇಳಿದ ಬಸವಣ್ಣನ ನಾಡಿನವರು. ಹೀಗಾಗಿ ಈ ಚುನಾವಣೆಯಲ್ಲಿ ಡಬಲ್ ಗೌರವವಿದೆ ಬೂತ್‍ನಲ್ಲಿ ಗೆದ್ದರೆ ನಾವೂ ರಾಜ್ಯದಲ್ಲೂ ಗೆಲ್ಲಬಹುದು. ಕಳೆದ ದಿನಗಳಲ್ಲಿ ನಾನು ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದಾಗ ಕರ್ನಾಟಕದ ಜನರು ಆಶೀರ್ವದಿಸಿದ್ದಾರೆ. ಇದೇ ರೀತಿಯ ಆಶೀರ್ವಾದ ಕರ್ನಾಟಕದ ಬಿಜೆಪಿ ನಾಯಕರ ಮೇಲೂ ಇದೆ ಎಂದು ಹೇಳಿದರು.

ನನ್ನ ಬೂತ್ ಗೆಲ್ಲಿಸಿ ಪಾರ್ಟಿಯ ಗೆಲುವನ್ನು ಪಕ್ಕಾ ಮಾಡಬೇಕು ಎಂದಿದ್ದೇನೆ. ಮುಂದಿನ 10 ದಿನಗಳಲ್ಲಿ ನಾವು ಪ್ರತಿ ಬೂತ್ ಗೆಲ್ಲಿಸಲು ನಾವು ಏನು ಮಾಡಬೇಕು ? ಎಂಬ ಕಾರ್ಯಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೆಲ್ಲಬೇಕಾದರೆ ವಿಜಯದಲ್ಲಿ ಗೆಲುವನ್ನು ನಂಬುವ 10 ಪುರುಷರು ಹಾಗೂ 10 ಮಹಿಳೆಯರ ಪ್ರಬಲ ಸಂಘಟನೆ ನಡೆಸಿ. ನಿಮ್ಮ ಡೈರಿಯಲ್ಲಿ ಕರ್ನಾಟಕ ಹಾಗೂ ದೇಶದಲ್ಲಿ ಬಿಜೆಪಿ ಯಾವ ರೀತಿ ಅಭಿವೃದ್ಧಿ ಮಾಡಿದೆ ಎನ್ನುವ ಮಾಹಿತಿ ಪ್ರತಿಯೊಬ್ಬರ ಡೈರಿಯಲ್ಲಿ ಇರಬೇಕು. ಈ ಮಾಹಿತಿಯನ್ನು ಗ್ರಾಮೀಣ ಜನರಿಗೂ ತಲುಪಿಸಿ. ಬೂತ್‍ನ ಜನರ ಮನಸ್ಸನ್ನು ಗೆದ್ದಾಗ ಸುಲಭವಾಗಿ ಪ್ರತಿಯೊಂದು ಬೂತ್ ಗೆಲ್ಲಬಹುದು. ಎಂದಿದ್ದಾರೆ. ಇದೇ ರೀತಿ ಅನೇಕ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಿ ಪ್ರೋತ್ಸಾಹಿಸಿದ್ದಾರೆ.

ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಪ್ರಧಾನ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಮಾತನಾಡುವುದರ ಮೂಲಕ ಪಕ್ಷದ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಶಕ್ತಿಯನ್ನು ತುಂಬಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಯಾವ ರೀತಿ ಎದುರಿಸಬೇಕು ಎಂಬುದನ್ನು ತಿಳಿಸಿದ್ದಾರೆ ಬೂತ್ ಮಟ್ಟದಲ್ಲಿ ಉತ್ತಮವಾದ ಕೆಲಸವನ್ನು ಮಾಡುವುದರ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಇದರ ಬಗ್ಗೆ ಕಾರ್ಯಕರ್ತರು ಸಜ್ಜಾಗಬೇಕಿದೆ ಎಂದಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಮೊಳಕಾಲ್ಮೂರಿನ ಅಧ್ಯಕ್ಷರಾದ ಫಕೀರಪ್ಪ ಶಿಂಧೆಯವರು ಮೋದಿಯವರಿಗೆ ಪ್ರಶ್ನೆಯನ್ನು ಕೇಳುವುದರ ಮೂಲಕ ಡಬ್ಬಲ್ ಇಂಜಿನಿ ಸರ್ಕಾರದಿಂದ ಯಾವ ರೀತಿ ಉಪಯೋಗವಾಗುತ್ತದೆ ಇದನ್ನು ಯಾವ ರೀತಿ ವಿಶ್ಲೇಷಣೆಯನ್ನು ಮಾಡಬಹುದೆಂದು ಪ್ರಶ್ನಿಸಿದಾಗ ಇದಕ್ಕೆ ಉತ್ತರಿಸಿದ ಮೋದಿಯವರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಯಾವುದೇ ರೀತಿಯಿಂದಲೂ ತಿರುಚದೆ ಮತದಾರರಿಗೆ ತಲುಪಿಸುವ ಕೆಲಸವನ್ನು ಮಾಡಬೇಕಿದೆ. ಸರ್ಕಾರದ ಈ ಯೋಜನೆಗಳನ್ನು ನೇರವಾಗಿ ಕಾರ್ಯಕರ್ತರು ಸಂಬಂಧಪಟ್ಟವರಿಗೆ ತಲುಪಿಸುತ್ತಾರೆ ಎಂಬುದನ್ನು ತಿಳಿಸಬೇಕಿದೆ. ಡಬ್ಬಲ್ ಇಂಜಿನ್ ಸರ್ಕಾರದಿಂದ ಉತ್ತಮವಾದ ಕೆಲಸಗಳಾಗುತ್ತವೆ. ಇದನ್ನು ಮತದಾರರಿಗೆ ತಿಳಿಸಿ ಮತಯಾಚನೆಯನ್ನು ಮಾಡಬೇಕಿದೆ ಎಂದರು.

ಪಕ್ಷದ ಕಾರ್ಯಕರ್ತರು ಈ ಚುನಾವಣೆಯಲ್ಲಿ ಯಾವ ರೀತಿ ಕೆಲಸವನ್ನು ಮಾಡಬೇಕೆಂದು ಪ್ರಧಾನ ಮಂತ್ರಿಗಳು ನೇರವಾಗಿ ತಿಳಿಸುವುದರ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಹುರುಪನ್ನು ತುಂಬಿದ್ದಾರೆ. ಇದರ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯನ್ನು ನಡೆಸಬೇಕಿದೆ ರಾಜ್ಯದಲ್ಲಿ ಮತ್ತೋಮ್ಮೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಡಬ್ಬಲ್ ಇಂಜಿನ್ ಸರ್ಕಾರ ಇದ್ದಲ್ಲಿ ರಾಜ್ಯದಲ್ಲಿ ಉತ್ತಮವಾದ ಕಾರ್ಯಗಳಾಗಲು ಸಾಧ್ಯವಿದೆ ಎಂದು ಸಚಿವ ನಾರಾಯಣಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಎಸ್. ನವೀನ್ ಮಾತನಾಡಿ, ಪ್ರದಾನ ಮಂತ್ರಿಗಳು ಇಂದು ವರ್ಚುವಲ್ ಕಾರ್ಯಕ್ರಮದ ಮೂಲಕ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ. ಕಾರ್ಯಕರ್ತರು ಯಾವ ರೀತಿ ಕೆಲಸವನ್ನು ಮಾಡಬೇಕೆಂದು ತಿಳಿಸುವುದರ ಮೂಲಕ ಅವರ ಉತ್ಸಾಹವನ್ನು ಹೆಚ್ಚಿಸುವ ಕಾರ್ಯವನ್ನು ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಧಾನ ಮಂತ್ರಿಗಳ ಈ ಮಾರ್ಗದರ್ಶನ ಪಕ್ಷದ ಕಾರ್ಯಕರ್ತರಲ್ಲಿ ಶಕ್ತಿಯನ್ನು ತುಂಬಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಕಾರ್ಯಕರ್ತನ ಪ್ರಶ್ನಗೆ ಉತ್ತರಿಸುವುದರ ಮೂಲಕ ಉತ್ಸಾಹವನ್ನು ತುಂಬಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಅದ್ಯಕ್ಷ ಕಲ್ಲೇಶಯ್ಯ, ವಕ್ರಾರ ನಾಗರಾಜ್ ಬೇದ್ರೆ, ಮಾದ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಶಂಬು, ಕಿರಣ, ಬಸಮ್ಮ, ಕಲಾವತಿ ,ವೆಂಕಿ  ಸೇರಿದಂತೆ  ಬಿಜೆಪಿ ಪಕ್ಷದ ಪಧಾದಿಕಾರಿಗಳು ಉಪಸ್ಥಿತಿ ಇದ್ದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!