ಕಲಬುರಗಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಗಳ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ಈ ಬಾರಿ ಕರ್ನಾಟಕ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಫುಲ್ ಆ್ಯಕ್ಟಿವ್ ಆಗಿದೆ. ಪ್ರಧಾನಿ ಮೋದಿ ಅವರು, ರಾಜ್ಯಕ್ಕೆ ಎರಡನೇ ಬಾರಿ ಬರುತ್ತಿದ್ದಾರೆ. ಮೊದಲ ಬಾರಿಗೆ ಕಲಬುರಗಿಗೆ ಭೇಟಿ ನೀಡುತ್ತಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಕಲಬುರಗಿಯ ಏರ್ ಪೋರ್ಟ್ ಗೆ ಬಂದು ಇಳಿಯಲಿದ್ದಾರೆ. ಬಳಿಕ ಅಲ್ಲಿಂದ ಕೊಡೇಕಲ್ ಹೆಲಿಪ್ಯಾಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಜಲಧಾರೆ ಮಿಷನ್ ಯೋಜನೆಯಡಿ, 1 ಸಾವಿರದ ನಾಲ್ಕು ಕೋಟಿ ರೂಪಾಯಿ ಯೋಜನೆಯ ಬಸವಸಾಗರ ಡ್ಯಾಂನ ಸ್ಕಾಡಾ ಕಾಲುವೆ ಉದ್ಘಾಟಿಸಲಿದ್ದಾರೆ. ಈ ಯೋಜನೆಯ ಮೂಲಕ ಸುಮಾರು 713 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ.
ಯಾದಗಿರಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಸುಮಾರು 4 ಸಾವಿರ 234 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಅದರ ಜೊತೆಗೆ ರಾಷ್ಟ್ರೀಯ ಹೆದ್ದಾರಿಗೂ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಮಳಖೇಡದಲ್ಲಿ ಲಂಬಾಣಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಇದು ಕಲಬುರಗಿಯಲ್ಲಿ ಅತಿ ದೊಡ್ಡ ಕಾರ್ಯಕ್ರಮ ಮಾಡಿ, ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ ಹಾಗೂ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಟಿಯಿಂದ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ.