ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27 : ಮೊಳಕಾಲ್ಮರು ವಕೀಲರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಪಿ.ಜಿ.ವಸಂತಕುಮಾರ್, ಉಪಾಧ್ಯಕ್ಷರಾಗಿ ಶಿವಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಎ.ಕೆ.ತಿಮ್ಮಪ್ಪ, ಸಹ ಕಾರ್ಯದರ್ಶಿಯಾಗಿ ಓ.ಮಹೇಶ್ ಇವರುಗಳು ಆಯ್ಕೆಯಾಗಿದ್ದಾರೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿರವರು ಮೊಳಕಾಲ್ಮುರು ವಕೀಲರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವವರನ್ನು ಸನ್ಮಾನಿಸಿದರು.
ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ಅನಿಲ್‍ಕುಮಾರ್, ಹಿರಿಯ ವಕೀಲರುಗಳಾದ ಬೊಮ್ಮಣ್ಣ, ಚಿನ್ನಪ್ಪ, ಜಯಣ್ಣ, ತಿಪ್ಪೇಸ್ವಾಮಿ, ಶರಣಪ್ಪ, ಹನುಮಂತಪ್ಪ, ಬಾಬು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

