Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಲಾರಿಗೆ ಬೈಕ್ ಡಿಕ್ಕಿ ಓರ್ವ ಮೃತ

---Advertisement---

 

ಸುದ್ದಿಒನ್, ಮೊಳಕಾಲ್ಮೂರು, ಆಗಸ್ಟ್. 18 : ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ
ನಾಗಸಮುದ್ರ ಗೇಟ್ ಬಳಿ ಇಂದು(ಭಾನುವಾರ) ಬೆಳಗಿನ ಜಾವ ಸುಮಾರು 3:30 ರ ವೇಳೆಯಲ್ಲಿ ನಡೆದಿದೆ.

ಬಳ್ಳಾರಿ – ಬೆಂಗಳೂರು ಹೆದ್ದಾರಿಯಲ್ಲಿ ರಾಯಚೂರಿನಿಂದ ಬೆಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಇಬ್ಬರು ವ್ಯಕ್ತಿಗಳು ನಾಗಸಮುದ್ರ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿದ್ದ ಮತ್ತೋರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿದ್ದು ಸಮೀಪದ ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ ಮೃತ ಬೈಕ್ ಸವಾರನ ಗುರುತು ಪತ್ತೆ ಆಗಿಲ್ಲ. ಮತ್ತು ಲಾರಿಯೂ ಪತ್ತೆಯಾಗಿಲ್ಲ.

ಸ್ಥಳಕ್ಕೆ ರಾಂಪುರ PSI ಮಹೇಶ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment