Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಮೊಳಕಾಲ್ಮೂರು | ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವು

---Advertisement---

ಸುದ್ದಿಒನ್, ಮೊಳಕಾಲ್ಮೂರು, ಆಗಸ್ಟ್.03 : ಇಂದು ಬೆಳ್ಳಂಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವತಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ನಾಗಸಮುದ್ರ ಗ್ರಾಮದ ಬಳಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ತೋರಣಗಲ್‌ ಮೂಲದ ಪಲ್ಲವಿ(18) ಎಂಬ ಯುವತಿ ಮೃತಪಟ್ಟಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ನಂತರ ಅವರನ್ನು ಬಳ್ಳಾರಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ರಾಂಪುರ ಠಾಣೆ ಪಿಎಸ್ ಐ ಮಹೇಶ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join WhatsApp

Join Now

Join Telegram

Join Now

Leave a Comment