ಸುದ್ದಿಒನ್, ಚಿತ್ರದುರ್ಗ, ಜನವರಿ.20 : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ.
ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿಗೆ ಸೇರಿದ ಬೊಮ್ಮಲಿಂಗನಹಳ್ಳಿ ಗ್ರಾಮದ ಬಸವರಾಜ (50 ವರ್ಷ) ಇಂದು ಬೆಳಿಗ್ಗೆ ಜಮೀನಿಗೆ ಹೋಗುವ ಸಮಯದಲ್ಲಿ ಚಿರತೆ ದಾಳಿ ಮಾಡಿದೆ.
ಚಿರತೆ ದಾಳಿಯಿಂದಾಗಿ ವ್ಯಕ್ತಿಯ ಕರಳು ಹೊರಗೆ ಬಂದಿದ್ದು, ಈತನ ಸ್ಥಿತಿ ಚಿಂತಾ ಜನಕವಾಗಿದೆ. ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಪಾಂಡುರಂಗಪ್ಪ ಗಾಯಾಳು ಬಸವರಾಜ ಅವರನ್ನು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಅರಣ್ಯಾಧಿಕಾರಿಗಳು ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











