ಸುದ್ದಿಒನ್, ಮೊಳಕಾಲ್ಮೂರು, ಏಪ್ರಿಲ್. 01 : ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಳುಗಳಿಗೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


