ವಿಶೇಷ ವರದಿ :
ಸಿದ್ದೇಶ್. ಜಿ. ವೆಂಕಟಾಪುರ
ವರದಿಗಾರರು, ಮೊಳಕಾಲ್ಮೂರು
ಮೊ : 97409 64139 Monikareddyl2401@gmail.com
ಸುದ್ದಿಒನ್, ಮೊಳಕಾಲ್ಮೂರು, ಆಗಸ್ಟ್. 26 : ತಾಲೂಕಿನ ಎಸ್. ಹನುಮಾಪುರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಹಾಗೂ ಕಳಶ ಪ್ರತಿಷ್ಠಾಪನಾ ಕಾರ್ಯಕ್ರಮವು ವಿವಿಧ ಪೂಜಾ-ಪುನಸ್ಕಾರಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮಕ್ಕೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ವೈ.ಪಿ. ಚೇತನ್ ಕುಮಾರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹರ್ಷಿ ವಾಲ್ಮೀಕಿಯವರ ಆದರ್ಶ, ಸಾಹಿತ್ಯ ಹಾಗೂ ಸಾಮಾಜಿಕ ಸಂದೇಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಪುತ್ಥಳಿ ಅನಾವರಣದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಪೂಜೆ-ಪುನಸ್ಕಾರಗಳು ಹಾಗೂ ಕಳಶ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿದವು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ನಾಯಕ್, ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್.ಬಿ. ಗೋವಿಂದಪ್ಪ, ವಾಲ್ಮೀಕಿ ಸಂಘದ ಸದಸ್ಯರಾದ ದೇವಸಮುದ್ರ ಪರಮೇಶಪ್ಪ, ಜೆ.ಬಿ.ಹಳ್ಳಿ ನಾಗೇಶಪ್ಪ, ದೇವಸಮುದ್ರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ಆರ್. ಕುಮಾರಸ್ವಾಮಿ, ಬೊಮ್ಮದೇವರಹಳ್ಳಿ ಡಿ. ಗೋವಿಂದರಾಜ್,ನಾಗಸಮುದ್ರ ಅಡಿವಿಮಾರಣ್ಣ, ಎಂ.ಬಿ.ಕೃಷ್ಣಪ್ಪ ನಾಯಕ, ಎಂ. ತಿಪ್ಪೇಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಎಸ್. ಹನುಮಾಪುರ ಗ್ರಾಮದ ಗುಂಡೇ ನಾಗಣ್ಣ, ಡಿ.ಎಸ್. ಪರಮೇಶಪ್ಪ, ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್. ಹನುಮಂತಪ್ಪ ಹಾಗೂ ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಮತ್ತು ವಾಲ್ಮೀಕಿ ಸಮಾಜದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.










