Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಮೊಬೈಲ್ ಕಳುವು ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಿ : ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ

---Advertisement---

 

ಸುದ್ದಿಒನ್, ಮೊಳಕಾಲ್ಮುರು, ಫೆಬ್ರವರಿ. 08 : ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಭಾನುವಾರ ಜನಸಂಪರ್ಕ ಸಭೆ ಹಾಗೂ ಕಳೆದುಕೊಂಡಿದ್ದ ಮೊಬೈಲ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮೊಳಕಾಲ್ಮುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಹಾಗೂ ಕಳೆದು ಹೋಗಿದ್ದ ಮೊಬೈಲ್ ಗಳನ್ನು ಜಪ್ತಿ ಮಾಡಿಕೊಂಡಿದ್ದ 26 ಮೊಬೈಲ್‌ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಮಾತನಾಡಿ, ಪೊಲೀಸ್‌ ಸಿಬ್ಬಂದಿಗೆ ಸಾರ್ವಜನಿಕರಿಂದ ಸಲಹೆ ಸೂಚನೆಗಳು ಬೇಕು. ನಿಮ್ಮೆಲ್ಲರ ಸಲಹೆ ಪಡೆದು ರೂಪುರೇಷೆ ಸಿದ್ದಪಡಿಸುತ್ತೇವೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸಲು ಪ್ರಯತ್ನಿಸುತ್ತೇವೆ. ನಿಮ್ಮ ಸೇವೆಗೆ ಸದಾ ಸಿದ್ಧರಿದ್ದೇವೆ’ ಎಂದು ಹೇಳಿದರು. ಪೊಲೀಸ್ ಹಾಗೂ ಜನರ ಮಧ್ಯೆ ಯಾವ ರೀತಿ ಸಂಪರ್ಕ ಇರಬೇಕು ಎಂಬುದರ ಬಗ್ಗೆ ವಿವರಿಸಿದರು.

ಜನಸಂದಣಿ ಇರುವ ಸ್ಥಳಗಳಲ್ಲಿ, ಬಸ್ ನಿಲ್ದಾಣ, ಮಾರುಕಟ್ಟೆ, ಜಾತ್ರೆ, ಕಾರ್ಯಕ್ರಮಗಳಲ್ಲಿ ಮೊಬೈಲ್‌ಗಳನ್ನು ಜೇಬು ಅಥವಾ ಕೈಯಲ್ಲಿ ಅಜಾಗರೂಕತೆಯಿಂದ ಇಡುವುದು ಅಪಾಯಕಾರಿಯಾಗಿದೆ. ಅಪರಿಚಿತರು ಮೊಬೈಲ್ ಕೇಳಿದರೆ ಅಥವಾ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡಿದರೆ ಎಚ್ಚರಿಕೆ ವಹಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಮೊಬೈಲ್ ಬಳಕೆ ತಪ್ಪಿಸಬೇಕು. ಮೊಬೈಲ್ ಕಳೆದುಹೋದಲ್ಲಿ ಅಥವಾ ಕಳ್ಳತನವಾದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಮೊಬೈಲ್ ಸುರಕ್ಷಿತವಾಗಿರಿಸಲು ಪಾಸ್‌ವರ್ಡ್, ಫಿಂಗರ್‌ಪ್ರಿಂಟ್ ಅಥವಾ ಫೇಸ್ ಲಾಕ್ ಬಳಸಬೇಕು. ಸಾರ್ವಜನಿಕರ ಸಹಕಾರದಿಂದಲೇ ಮೊಬೈಲ್ ಕಳ್ಳತನವನ್ನು ತಡೆಯಲು ಸಾಧ್ಯ ಎಂದರು.

ಸಭೆಯಲ್ಲಿ ಸಿಪಿಐ ನಾಗರಾಜ್, ಹಾಗೂ ಮುಖಂಡರಾದ ಚಂದ್ರಶೇಖರ ಗೌಡ, ಶ್ರೀನಿವಾಸ್ ಮೂರ್ತಿ ಮಾತನಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now