Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೊಳಕಾಲ್ಮೂರು : ಪಿಡಿಒ ಅಮಾನತು

---Advertisement---

 

ಚಿತ್ರದುರ್ಗ. ಫೆ.13 : ಮೊಳಕಾಲ್ಮೂರು ತಾಲ್ಲೂಕು ಜೆ.ಬಿ. ಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಸುರೇಶ್ ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಸುರೇಶ್ ಅವರು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ, ಒಬ್ಬ ಜವಾಬ್ದಾರಿಯುತ, ಸರ್ಕಾರಿ ನೌಕರರಾಗಿದ್ದುಕೊಂಡು, ಸರ್ಕಾರದ ಮತ್ತು ಮೇಲಾಧಿಕಾರಿಗಳ ಆದೇಶಗಳನ್ನು ಉಲ್ಲಂಘನೆ ಮಾಡುವ ಮೂಲಕ ಸರ್ಕಾರಿ ನೌಕರರ ವೃತ್ತಿಗೆ ತರವಲ್ಲದ ರೀತಿ ವರ್ತಿಸಿ, ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದ ಕಾರಣ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಹಾಗೂ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಿರುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment